ನಾಗಮಂಗಲ ಕಾಂಗ್ರೆಸ್ ಉಸ್ತುವಾರಿಯಾಗಿ ಕೋ.ಪು. ಗುಣಶೇಖರ್ ನೇಮಕ
ನವೆಂಬರ್ 10, 2022
ಮಂಡ್ಯ : ನಾಗಮಂಗಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿ ಹಿರಿಯ ಕಾಂಗ್ರೆಸ್ ಮುಖಂಡ ಕೋ.ಪು.ಗುಣಶೇಖರ್ ಅವರನ್ನು ನೇಮಕ ಮಾಡಲಾಗಿದೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹಾಗೂ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷರಾಗಿ ಕ್ರಿಯಾಶೀಲವಾಗಿ ಪಕ್ಷ ಸಂಘಟನೆ ಮಾಡಿ ಸಂಘಟನಾ ಕ್ಷೇತ್ರದಲ್ಲಿ ಹೆಸರಾಗಿರುವ ಕೋ.ಪು.ಗುಣಶೇಖರ್ ಅವರನ್ನು ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅನುಮೋದನೆ ಮೇರೆಗೆ ನೇಮಕ ಮಾಡಲಾಗಿದೆ ಎಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 ಕಾಮೆಂಟ್‌ಗಳು