ಪ್ರತಿಭಾ ಕಾರಂಜಿ : ಜಾನಪದ ಗೀತೆ ಸ್ಪರ್ಧೆಯಲ್ಲಿ ಹೇಮಾಗುಣಶೇಖರ್ ಪ್ರಥಮ
ನವೆಂಬರ್ 14, 2022
ಪಾಂಡವಪುರ : ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಡೆದ ಜಾನಪದ ಗೀತೆ ಸ್ಪರ್ಧೆಯಲ್ಲಿ ಹೇಮಾಗುಣಶೇಖರ್ ಪ್ರಥಮ ಸ್ಥಾನ ಗಳಿಸಿದ್ದಾರೆ. ತಾಲ್ಲೂಕಿನ ಬೇಬಿ ಬೆಟ್ಟದಲ್ಲಿರುವ ಡಿಎಂಎಸ್ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯ ಜಾನಪದ ಗೀತೆ ಸ್ಪರ್ಧೆಯಲ್ಲಿ ಪಾಂಡವಪುರದ ಎಲ್.ಕೆ.ಆರ್ ಸಿಬಿಎಸ್‍ಸಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಹೇಮಾಗುಣಶೇಖರ್ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎ.ಲೋಕೇಶ್ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಕೇಶವ ಮತ್ತಿತರರು ಹೇಮಾಗುಣಶೇಖರ್ ಗೆ ಬಹುಮಾನ ವಿತರಿಸಿದರು.
0 ಕಾಮೆಂಟ್‌ಗಳು