ತಿ.ನರಸೀಪುರ ತಾಲ್ಲೂಕು ನಿಲಸೋಗೆ ಗ್ರಾಮದಲ್ಲಿ ಘಟನೆ : ರಾಚೇಗೌಡ, ಮಹದೇವಸ್ವಾಮಿ, ಹರೀಶ್ ಮೃತಪಟ್ಟವರು
ಟಿ ನರಸೀಪುರ : ಗದ್ದೆಗೆ ಔಷಧಿ ಸಿಂಪಡಿಸಲು ಹೋಗಿದ್ದ ವೇಳೆಯಲ್ಲಿ ಮೂವರು ರೈತರಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ನಿಲಸೋಗೆ ಗ್ರಾಮದಲ್ಲಿ ನಡೆದಿದೆ.
ದುರ್ಘಟನೆಯಲ್ಲಿ ಜಮೀನು ಮಾಲೀಕ ರಾಜೇಗೌಡ (62 ) ಮಗ ಹರೀಶ್ (30 ) ಮತ್ತು ಮಹಾದೇವಸ್ವಾಮಿ(33) ಮೃತಪಟ್ಟ ದುರ್ದೈವಿಗಳಾಗಿದ್ದು, ಮುಂಜಾನೆ ಜಮೀನಿಗೆ ಔಷಧಿ ಸಿಂಪಡಿಸಲು ಹೋಗಿದ್ದಾಗ ಜಮೀನಿನಲ್ಲಿ ವಿದ್ಯುತ್ ತಂತಿ ಬಿದ್ದಿರುವುದನ್ನು ಗಮನಿಸದೆ ತುಳಿದ ಕಾರಣ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.
ಸ್ಥಳಕ್ಕೆ ಶಾಸಕ ಎಂ. ಅಶ್ವಿನ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿ, ದುರ್ಘಟನೆಗೆ ಸಂತಾಪ ಸೂಚಿಸಿದರು. ಸರ್ಕಾರದಿಂದ ಸಿಗುವ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸಂದರ್ಭದಲ್ಲಿ ಡಿವೈಎಸ್ಪಿ ವಿ. ಗೋವಿಂದರಾಜು, ಸರ್ಕಲ್ ಇನ್ಸ್ಪೆಕ್ಟರ್ ಕೃಷ್ಣಪ್ಪ ಇತರರು ಹಾಜರಿದ್ದರು.
ಈ ಬಗ್ಗೆ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
0 ಕಾಮೆಂಟ್‌ಗಳು