ಸರ್ಕಾರಿ ಶಾಲಾ ಆವರಣದಲ್ಲಿ ಪ್ರತಿಭಾ ಪುರಸ್ಕಾರ ನಡೆಸಲು ಶಾಸಕ ಅಡ್ಡಗಾಲು : ಡಿ.ಸಿ.ತಮ್ಮಣ್ಣ ವಿರುದ್ಧ ಕದಲೂರು ಉದಯ್ ಕಿಡಿ
ನವೆಂಬರ್ 18, 2022
-ಟಿ.ಬಿ.ಸಂತೋಷ, ಮದ್ದೂರು
ಮದ್ದೂರು : ತಾಲೂಕಿನಾದ್ಯಂತ ಸರ್ಕಾರಿ ಶಾಲೆಗಳ ಆವರಣದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಲು ಶಾಸಕರು ಅವಕಾಶ ನೀಡದೆ ರಾಜಕೀಯ ಮಾಡುತಿದ್ದಾರೆ ಎಂದು ಸಮಾಜ ಸೇವಕ ಕದಲೂರು ಉದಯ್ ಆರೋಪಿಸಿದರು. ತಾಲೋಕಿನ ಯಡಗನಹಳ್ಳಿ ಮಾರಿಗುಡಿ ಆವರಣದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲೆಯಲ್ಲಿ ಕಳೆದ ಸಾಲಿನಲ್ಲಿ 5, 7, 10 ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಮಕ್ಕಳನ್ನು ಶೈಕ್ಷಣಿಕವಾಗಿ ಉತ್ತೇಜಿಸುವ ನಿಟ್ಟಿನಲ್ಲಿ ನಮ್ಮ ಟ್ರಸ್ಟ್‍ನಿಂದ ಪ್ರತಿಭಾ ಪುರಸ್ಕಾರ ನೀಡಿ ಮಕ್ಕಳನ್ನು ಪ್ರೋತ್ಸಾ ಹಿಸುತ್ತಿದ್ದೇವೆ. ಜತೆಗೆ ತಾಲೋಕಿನಾದ್ಯಂತ ಸರ್ಕಾರಿ ಶಾಲೆಗಳ ನವೀಕರಣಕ್ಕೆ ಧನಸಹಾಯ ಸೇರಿದಂತೆ ಶಾಲಾ ಮಕ್ಕಳಿಗೆ ಬ್ಯಾಗ್ ಇನ್ನಿತರ ಶೈಕ್ಷಣಿಕ ಪರಿಕರಗಳನ್ನು ನೀಡಿ ನೆರವಾಗಿದ್ದೇವೆ. ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲಾ ಮಕ್ಕಳ ಪ್ರವೇಶ ಶುಲ್ಕವನ್ನೂ ಸಹ ನಮ್ಮ ಟ್ರಸ್ಟ್ ಭರಿಸುತ್ತದೆ. ಆದರೆ, ಇಂತಹ ಕಾರ್ಯಕ್ರಮಕ್ಕೂ ಶಾಸಕರು ರಾಜಕೀಯ ಮಾಡಿ ಅಡ್ಡಿ ಪಡಿಸುವುದು ಸರಿಯಲ್ಲ ಎಂದರು. ಈ ಸಂದರ್ಭದಲ್ಲಿ ಟ್ರಸ್ಟಿ ಕದಲೂರು ರವಿ, ಗ್ರಾಪಂ ಸದಸ್ಯ ತಿಮ್ಮೇಗೌಡ, ಎಸ್‍ಡಿಎಂಸಿ ಅಧ್ಯಕ್ಷ ಕೃಷ್ಣೇಗೌಡ, ಮಾಜಿ ಅಧ್ಯಕ್ಷ ಬೋಮ್ಮೇಗೌಡ, ತಿಮ್ಮೇಗೌಡ, ಕೆಂಚೆಗೌಡ, ರವಿ, ಮಹೇಶ್, ರವಿ, ಶಂಕರ್, ಬಸವ ಮುಂತಾದವರು ಉಪಸ್ಥಿತರಿದ್ದರು.
0 ಕಾಮೆಂಟ್‌ಗಳು