ಪಾರ್ಟಿ ಜ್ಯೋತಿಷಿ ಓಕೆ ಅಂದ್ಮೇಲೆ ಜೆಡಿಎಸ್ ಪಟ್ಟಿ ಬಿಡುಗಡೆ
ಮೈಸೂರು : ಕರ್ನಾಟಕ ರಾಜ್ಯದ ಯಾವುದೇ ನೀರಾವರಿ ಯೋಜನೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ಮೈಸೂರು ಚಾಮುಂಡಿಬೆಟ್ಟದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಇನ್ನೇನು ಸಿಹಿ ಸುದ್ದಿ ಕೊಡ್ತೀವಿ ಅಂದ್ರು, ಯಾವುದೂ ಕೊಡಲಿಲ್ಲ. ಒಟ್ಟಾರೆ ಕೇಂದ್ರದಲ್ಲಿ ಯಾವುದೇ ಸರ್ಕಾರವಿದ್ದರೂ ಕರ್ನಾಟಕದ ಪಾಲಿಗೆ 75 ವರ್ಷಗಳಿಂದ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದರು.
ಪಂಚರತ್ನ ರಥಯಾತ್ರೆ 36 ದಿನಗಳ ಮೊದಲ ಹಂತಕ್ಕೆ ಚಾಲನೆ ನೀಡಲಾಗಿದೆ. ಪ್ರತಿನಿತ್ಯ ಒಂದು ಕ್ಷೇತ್ರದ 30 ಹಳ್ಳಿಗಳಲ್ಲಿ ರಥಯಾತ್ರೆ ನಡೆಸಿ ಪಂಚರತ್ನ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುತ್ತೇವೆ. ಜತೆಗೆ ಗ್ರಾಮ ವಾಸ್ತವ್ಯವೂ ನಡೆಸಿ ಜನರ ಸಮಸ್ಯೆಗಳನ್ನು ಆಲಿಸಲಾಗುವುದು. ಫೆಬ್ರವರಿ ಅಂತ್ಯಕ್ಕೆ ಮೈಸೂರಿನಲ್ಲಿ ಸಮಾರೋಪ ಸಮಾರಂಭ ನಡೆಸಲಾಗುವುದು ಎಂದರು.
ಮುಂದಿನ ವಿಧಾನಸಭಾ ಚುನಾವಣೆಯ 100 ಅಭ್ಯರ್ಥಿಗಳ ಪಟ್ಟಿ ಸಿದ್ಧವಿದೆ. ನಮ್ಮ ಪಕ್ಷದ ಜ್ಯೋತಿಷಿ ಸನ್ಮಾನ್ಯ ಹೆಚ್.ಡಿ.ರೇವಣ್ಣ ನವರ ನಿಗದಿ ಪಡಿಸಿದ ದಿನದಂದು ವರಿಷ್ಠರಾದ ದೇವೇಗೌಡರ ಮೂಲಕ ಬಿಡುಗಡೆ ಮಾಡಿಸಲಾಗುವುದು ಎಂದರು.
ಜಾರಕಿಹೋಳಿ ಸಹೋದರರು ಜೆಡಿಎಸ್ ಸೇರ್ಪಡೆ ಪ್ರಶ್ನೆಗೆ ಸಂಬಂಧಿಸಿದಂತೆ ಮಾತನಾಡಿದ ಹೆಚ್‍ಡಿಕೆ ಇವ್ಯಾವು ನಮ್ಮ ಮುಂದಿಲ್ಲ. ನಾವು 123 ಕ್ಷೇತ್ರಗಳನ್ನು ಗೆಲ್ಲುವ ಬಗ್ಗೆ ಚಿಂತನೆಯಲ್ಲಿದ್ದೇವೆ ಎಂದರು.
ಶಾಸಕರಾದ ಜಿ.ಟಿ.ದೇವೇಗೌಡ, ಸಿ.ಎಸ್.ಪುಟ್ಟರಾಜು, ಸಾರಾ ಮಹೇಶ್, ಬಂಡೆಪ್ಪ ಕಾಶಂಪೂರ್ ಮತ್ತಿತರರು ಇದ್ದರು.
0 ಕಾಮೆಂಟ್‌ಗಳು