ಸಮಾಜದ ಅಭಿವೃದ್ಧಿಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಭಾಸ್ಕರ್ ರಾವ್

ಕರ್ನಾಟಕ ಪತ್ರಕರ್ತರ ಸಂಘದ ಹನೂರು ತಾಲ್ಲೂಕು ಘಟಕ ಉದ್ಘಾಟನೆ 

ಹನೂರು : ಸಮಾಜದ ಅಭಿವೃದ್ಧಿಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದಾಗಿದ್ದು, ಎಲ್ಲಾ ವಿಷಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಪತ್ರಕರ್ತರ ಕರ್ತವ್ಯ ಎಂದು ನಿವೃತ್ತ ಐಪಿಎಸ್ ಅಧಿಕಾರಿ, ಆಮ್ ಆದ್ಮಿ ಪಕ್ಷದ ಮುಖಂಡ ಭಾಸ್ಕರ್ ರಾವ್ ತಿಳಿಸಿದರು. 
ಭಾನುವಾರ ಪಟ್ಟಣದ ಬೆಟ್ಟಳ್ಳಿ ಮಾರಮ್ಮ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ಹನೂರು ತಾಲ್ಲೂಕು ಘಟಕದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 
ಮಾಧ್ಯಮಗಳು ಮಾಹಿತಿ ನೀಡುವ ಮೂಲಕ ಅತ್ಯಂತ ಪ್ರಭಾವ ಶಾಲಿಯಾಗಿ ಜನರ ನಡುವೆ ಕೊಂಡಿಯಾಗಿ ಕೆಲಸ ಮಾಡುತ್ತಿವೆ. ಜನರ ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ, ಶಾಸಕಾಂಗ, ಕಾಯಾರ್ಂಗ, ನ್ಯಾಯಾಂಗದ ಜೊತೆ ಪತ್ರಿಕಾ ರಂಗ ಮಹತ್ವವನ್ನು ಪಡೆದಿದೆ. ಇಲ್ಲಿನ ಕರ್ನಾಟಕ ಪತ್ರಕರ್ತರ ಸಂಘ ಸಮಾಜಮುಖಿ ಕಾರ್ಯಕ್ರಮದಲ್ಲಿ ತೊಡಗಿರುವುದು ಶ್ಲಾಘನೀಯ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಾಲೂರು ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ ಉತ್ತರ ಕರ್ನಾಟಕದಿಂದ ದಕ್ಷಿಣ ಕರ್ನಾಟಕದತ್ತ ಪಾದಾರ್ಪಣೆ ಮಾಡಿರುವ ಕರ್ನಾಟಕ ಪತ್ರಕರ್ತರ ಸಂಘ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಪ್ರಥಮವಾಗಿ ಉದ್ಘಾಟನೆ ಆಗುತ್ತಿರುವುದು ಸಂತಸದ ವಿಷಯ, ಸಂಘದ ಧ್ಯೇಯೋದ್ದೇಶಗಳನ್ನು ಗಮನಿಸಿದರೆ ಪ್ರತಿಕಾ ಏಜೆಂಟ್ ಗಳು ವರದಿಗಾರರಿಗೂ ವಿಮಾ ಸೌಲಭ್ಯ ಸೇರಿದಂತೆ ಸಾಕಷ್ಟು ಭದ್ರತೆ ದೊರೆಯುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.
ಸಂಘದ ರಾಜ್ಯಾಧ್ಯಕ್ಷ ಮುರುಗೇಶ್ ಶಿವಪೂಜಿ ಮಾತನಾಡಿ, ಕರ್ನಾಟಕ ಪತ್ರಕರ್ತರ ಸಂಘವು ದೆಹಲಿಯ ಇಂಡಿಯನ್ ಜನರ್ಲಿಸ್ಟ್ ಯೂನಿಯನ್ ಅಡಿಯಲ್ಲಿ ಸದಸ್ಯತ್ವವನ್ನು ಹೊಂದಿದ್ದು ರಾಷ್ಟ್ರ ಮಟ್ಟದಲ್ಲಿ ಸಂಘ ಗುರುತಿಸಿಕೊಂಡಿದೆ. ನಮ್ಮ ಸಂಘದಲ್ಲಿ ಸದಸ್ಯತ್ವವನ್ನು ತೆಗೆದುಕೊಂಡ ಸದಸ್ಯರುಗಳಿಗೆ ಯಾವುದೇ ತಾರತಮ್ಯವಿಲ್ಲದೇ  4 ಲಕ್ಷ ರೂ ಅಪಘಾತ ವಿಮೆಯ ಸೌಲಭ್ಯವಿದೆ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಲವಾರು ಸಾಧಕರನ್ನುಗೌರವಿಸಲಾಯಿತು

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ರಹಮಾನ್ ನಿಧನಕ್ಕೆ ಸಂತಾಪ ಸೂಚಿಸಿ ಮೌನಚರಣೆ ನಡೆಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನ ಸಾಲೂರು ಶ್ರೀಗಳು ಹಾಗೂ ಜೆಡಿಎಸ್ ರಾಜ್ಯ ಉಪಾದ್ಯಕ್ಷ ಮಂಜುನಾಥ್ ಸಂಘದ ನೂತನ ಕಚೇರಿ ಉದ್ಘಾಟಿಸಿದರು. ಪಪಂ ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಹರೀಶ್, ಮಹೇಶ್,
ಮಹೇಶ್ ನಾಯ್ಕ್, ಮುಮ್ತಾಜ್ ಭಾನು, ಡಿವೈಎಸ್‍ಪಿ ಮಹಾನಂದ್, ಪೊಲೀಸ್ ಇನ್ಸ್‍ಪೆಕ್ಟರ್ ಸಂತೋμï ಕಶ್ಯಪ್, ತಾಪಂ ಮಾಜಿ ಸದಸ್ಯ ಜಾವಾದ್ ಅಹಮದ್, ಮುಖಂಡರಾದ ಕೊಪ್ಪಾಳಿ ಮಹದೇವ್, ಮಂಗಲ ಪುಟ್ಟರಾಜು, ಪ್ರಜಾಕೀಯ ಮುಖಂಡ ನಾಗರಾಜ್, ಪಕ್ಷೇತರ ಆಭ್ಯರ್ಥಿ ಮುಜಾಮಿಲ್ ಪಾμÁ, ರೈತ ಸಂಘದ ಅಧ್ಯಕ್ಷರಾದ ಗೌಡೇಗೌಡ, ಚಂಗಡಿ ಕರಿಯಪ್ಪ, ಹಿರಿಯ ಪತ್ರಕರ್ತರಾದ ವೆಂಕಟೇಗೌಡ, ರೂಪೇಶ್ ಕುಮಾರ್, ನಾಗೇಶ್, ಹೆಚ್.ಎಂ.ಕೀರ್ತಿಕೇಶ್ವರ್, ಆಮ್ ಆದ್ಮಿ ಪಕ್ಷದ ಮುಖಂಡ ನಾಗೇಂದ್ರ ಸೇರಿದಂತೆ ಹಲವರು ಹಾಜರಿದ್ದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು