ಪ್ರತಿಭಟನೆ ಮೂಲಕ ಎಐಡಿಎಸ್‍ಓ 69ನೇ ಸಂಸ್ಥಾಪನಾ ದಿನ ಆಚರಣೆ

ಮೈಸೂರು : ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ರಾಮಸ್ವಾಮಿ ವೃತ್ತದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುವುದರ ಮೂಲಕ ಎಐಡಿಎಸ್‍ಓ 69ನೇ ಸಂಸ್ಥಾಪನಾ ದಿನ ಆಚರಣೆ ಮಾಡಿದರು.
ಈ ವೇಳೆ ಎಐಡಿಎಸ್‍ಓ ಜಿಲ್ಲಾ ಸೆಕ್ರೆಟೇರಿಯಟ್ ಸದಸ್ಯ ನಿತಿನ್ ಮಾತನಾಡಿ, ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯು ಕಳೆದ 68 ವರ್ಷಗಳಿಂದ ವಿದ್ಯಾರ್ಥಿಗಳಲ್ಲಿ ಮಹಾನ್ ವ್ಯಕ್ತಿಗಳ ಆದರ್ಶ, ಮೌಲ್ಯಗಳನ್ನು ಬೆಳೆಸುತ್ತಾ, ಉನ್ನತ ನೀತಿ, ಸಂಸ್ಕøತಿಯನ್ನು ಎತ್ತಿ ಹಿಡಿಯುತ್ತಾ, ಪ್ರತಿ ಅನ್ಯಾಯದ ವಿರುದ್ಧ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳನ್ನು ಉಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಒಂದು ಗೂಡಿಸುವ ಸತತ ಪ್ರಯತ್ನ ನಡೆಸುತ್ತಿದೆ ಎಂದರು.
ಈ ದೇಶದಲ್ಲಿ ಹುಟ್ಟಿದ ಪ್ರತಿಯೊಂದು ಮಗುವಿಗೂ ಯಾವುದೇ ತಾರತಮ್ಯವಿಲ್ಲದೆ ಶಿಕ್ಷಣ ದೊರೆಯಬೇಕು. ಶಿಕ್ಷಣವು ಧರ್ಮನಿರಪೇಕ್ಷ -ವೈಜ್ಞಾನಿಕ-ಪ್ರಜಾತಾಂತ್ರಿಕವಾಗಿ ಇರಬೇಕು ಎಂಬ ಧ್ಯೇಯದೊಂದಿಗೆ ಎಐಡಿಎಸ್ಓ ಇಂದು ಎಲ್ಲಾ ರಾಜ್ಯಗಳಲ್ಲಿ ನಿರಂತರವಾಗಿ ಮುನ್ನಡೆಯುತ್ತಿದೆ.
ಅಸಮಾನತೆ, ಶಿಕ್ಷಣದ ಖಾಸಗೀಕರಣ, ನಿರುದ್ಯೋಗ, ಬಡತನ, ಜಾತಿ ಹಾಗೂ ಕೋಮು ವೈಷಮ್ಯವಿಲ್ಲದ ಭಾರತ ನಿರ್ಮಾಣ ಮಾಡುವುದು ಸಹ ಎಐಡಿಎಸ್ಒ ತನ್ನ ಹೋರಾಟದ ಭಾಗವನ್ನಾಗಿಸಿಕೊಂಡಿದೆ ಎಂದು ತಿಳಿಸಿದರು.
ಮೈಸೂರು ಜಿಲ್ಲೆಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ತೆರೆಯಬೇಕು, ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು, ಸೂಕ್ತ ಸಮಯಕ್ಕೆ ವಿದ್ಯಾರ್ಥಿ ವೇತನ ನೀಡಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಹಾಸ್ಟೆಲ್ ವ್ಯವಸ್ಥೆಯನ್ನು ಮಾಡಬೇಕು. ಎಲ್ಲಾ ಹಳ್ಳಿಗಳಿಗೆ ಸಮರ್ಪಕವಾದ ಬಸ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು. 
ಕಾರ್ಯಕ್ರಮದಲ್ಲಿ ಎಐಡಿಎಸ್ಒ ಜಿಲ್ಲಾ ಅಧ್ಯಕ್ಷ ಸುಭಾμï, ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ಜಿಲ್ಲಾ ಉಪಾಧ್ಯಕ್ಷೆ ಆಸಿಯಾ ಬೇಗಂ, ಕಾರ್ಯಕಾರಿ ಸಮಿತಿ ಮಂಡಳಿ ಸದಸ್ಯರಾದ ಸ್ವಾತಿ,  ಹೇಮಾಲತಾ, ಚಂದ್ರಿಕ, ಚಂದನ ಹಾಗೂ ಮಹಾರಾಜ  ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು