ಅಪ್ರಾಪ್ತ ಶಾಲಾ ಬಾಲಕಿ ಜೊತೆ ಲವ್ವಿ-ಡವ್ವಿ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ 7 ವರ್ಷ ಜೈಲು, 5 ಸಾವಿರ ದಂಡ

ಚಾಮರಾಜನಗರ: ಶಾಲಾ ಬಾಲಕಿಗೆ ಪ್ರೀತಿ ಪ್ರೇಮ ಎಂದು ತಲೆಕೆಡಿಸಿ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯವು 7 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ. 
ಚಾಮರಾಜನಗರ ತಾಲೂಕಿನ ಮರಿಯಾಲ ಗ್ರಾಮದ ಪುಟ್ಟರಾಜು ಶಿಕ್ಷೆಗೊಳಗಾದ ಅಪರಾಧಿ. ಶಾಲೆಗೆ ತೆರಳುತ್ತಿದ್ದ ಬಾಲಕಿ ಜೊತೆ ಪುಟ್ಟರಾಜು ಸಲುಗೆ ಬೆಳೆಸಿಕೊಂಡು ಪ್ರೀತಿ-ಪ್ರೇಮ ಎಂದು ತಲೆಕೆಡಿಸಿ ಲೈಂಗಿಕ ಕ್ರಿಯೆ ನಡೆಸಿದ್ದರ ಸಂಬಂಧ ಕಳೆದ 2017 ರಲ್ಲಿ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 
ಮಕ್ಕಳ ಸ್ನೇಹಿ ನ್ಯಾಯಾಲಯದಲ್ಲಿ ಈ ಸಂಬಂಧ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 7 ವರ್ಷ ಕಠಿಣ ಶಿಕ್ಷೆ 5 ಸಾವಿರ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಕೆ.ಯೋಗೇಶ್ ವಾದ ಮಂಡಿಸಿದ್ದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು