ಚಾಮರಾಜನಗರ : ಪಾದಾಚಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ಯಳಂದೂರು ರಸ್ತೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ 35 ವರ್ಷದ ನಾಗೇಂದ್ರ ಮೃತ ದುರ್ದೈವಿ. ಸಂತೆಮರಹಳ್ಳಿಯ ಕಾವೇರಿ ಪೈಪ್‍ಲೈನ್ ಕಾಮಗಾರಿಯಲ್ಲಿ ಈತ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು ರಸ್ತೆಬದಿ ನಿಂತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಸಂಬಂಧ ಸಂತೆಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 ಕಾಮೆಂಟ್‌ಗಳು