ಕೊಳ್ಳೇಗಾಲ : ಮಲಗಿದ್ದ ವ್ಯಕ್ತಿಯ ತಲೆಯ ಮೇಲೆ ಸೈಜುಗಲ್ಲು ಎತ್ತಿಹಾಕಿ ಕೊಲೆ ಮಾ ಡಿರುವ ಘಟನೆ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ಜಿ.ವಿ. ಗೌಡ ಬಡಾವಣೆಯಲ್ಲಿ ನಡೆದಿದೆ. 45 ವರ್ಷ ಮಹದೇವಸ್ವಾಮಿ ಕೊಲೆಯಾದ ವ್ಯಕ್ತಿ. ಈತನಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಪತ್ನಿ ಹಾಗೂ ಮಗ ಪ್ರವಾಸಕ್ಕೆ ತೆರಳಿದ್ದರು. ಮನೆಯಲ್ಲಿ ಮಹದೇವ ಸ್ವಾಮಿ ಒಬ್ಬನೇ ಇದ್ದಾಗ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ವಿಷಯ ತಿಳಿದ ಡಿವೈಎಸ್ಪಿ ಜಿ.ಯು. ಸೋಮೇಗೌಡ, ವೃತ್ತ ನಿರೀಕ್ಷಕ ಶಿವರಾಜ್ ಮುಧೋಳ್ ಹಾಗೂ ಸಬ್ ಇನ್ಸ್‍ಪೆಕ್ಟರ್ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತ ದೇಹವನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಕಳಿಸಲಾಗಿದ್ದು, ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 ಕಾಮೆಂಟ್‌ಗಳು