ಯಳಂದೂರು : ತಾಲೂಕಿನ ಚಾಮಲಾಪುರ ಗ್ರಾಮದಲ್ಲಿ ಉಮೇಶ್ ಎಂಬ ರೈತನಿಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಎರಡು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಸಂಪೂರ್ಣವಾಗಿ ನಾಶವಾಗಿದೆ.
ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ವಾಹನ ದೊಂದಿಗೆ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ಅಳಲು ತೋಡಿಕೊಂಡ ರೈತ ಉಮೇಶ್ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನೇ ನಂಬಿ ಜೀವನ ನಡೆಸುವ ನಮಗೆ ಕಬ್ಬು ಸುಟ್ಟು ಹೋದ ಪರಿಣಾಮ ಸುಮಾರು ಮೂರು ಲಕ್ಷಕ್ಕೂ ಅಧಿಕ ಮೊತ್ತದ ನಷ್ಟ ಉಂಟಾಗಿದ್ದು ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಿ ಸರ್ಕಾರದಿಂದ ದೊರೆಯುವ ಪರಿಹಾರದಿಂದ ತಮಗೆ ಉಂಟಾಗಿರುವ ನಷ್ಟವನ್ನು ಬರಿಸಿ ಕೊಡಬೇಕೆಂದು ಈ ಮೂಲಕ ಮನವಿ ಮಾಡಿದ್ದಾರೆ.
0 ಕಾಮೆಂಟ್‌ಗಳು