ಹನೂರು : ವಿಶ್ವ ಅಂಗವಿಕಲರ ದಿನಾಚರಣೆ ಪ್ರಯುಕ್ತ ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮ
ಡಿಸೆಂಬರ್ 04, 2022
ಹನೂರು : ವಿಶ್ವ ಅಂಗವಿಕಲರ ದಿನಾಚರಣೆ ಪ್ರಯುಕ್ತ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಸಂಯುಕ್ತಾಶ್ರಯದಲ್ಲಿ ಜಾಥಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ತಹಸೀಲ್ದಾರ್ ಆನಂದಯ್ಯ ಮಾತನಾಡಿ, ದೈಹಿಕ ನ್ಯೂನತೆ ಇರುವವರು ಅಂಗವಿಕಲರಲ್ಲ, ವಿಶೇಷ ಚೇತನರು, ಇವರಲ್ಲೂ ಸಾಕಷ್ಟು ಪ್ರತಿಭಾವಂತರಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ವಿಶೇಷ ಚೇತನರು ಕೆಲಸ ಮಾಡುತ್ತಿದ್ದು, ಕರ್ತವ್ಯದಲ್ಲಿ ಸಾಮಾನ್ಯರಿಗಿಂತಲೂ ಇವರ ಹುಮ್ಮಸ್ಸು ಹೆಚ್ಚಾಗಿದೆ ಎಂದರು. ಬಿಇಒ ಶಿವರಾಜ್, ಬಿಐಆರ್‍ಟಿ ಕೃಷ್ಣ, ಅಕ್ಷರ ದಾಸೋಹ ಅಧಿಕಾರಿ ದೇವರಾಜ್ ಇನ್ನಿತರರು ಇದ್ದರು.
0 ಕಾಮೆಂಟ್‌ಗಳು