ಲಾಲು ಪ್ರಸಾದ್ ಯಾದವ್ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿ : ತೇಜಸ್ವಿ ಯಾದವ್

ಲಾಲುಗೆ ಕಿಡ್ನಿ ದಾನ ಮಾಡಿದ ಮಗಳು ರೋಹಿಣಿ ಆಚಾರ್ಯ 

ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ  ಎಂದು ಪುತ್ರ ತೇಜಸ್ವಿ ಯಾದವ್ ತಿಳಿಸಿದ್ದಾರೆ.
ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ಲಾಲು ಪ್ರಸಾದ್ ಯಾದವ್ ರನ್ನು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಾಲು ಅವರಿಗೆ ತಮ್ಮ ಮಗಳು ರೋಹಿಣಿ ಆಚಾರ್ಯ ಒಂದು ಕಿಡ್ನಿ ನೀಡಲು ಮುಂದಾಗಿದ್ದರು. ಇದೀಗ ನಡೆದಿರುವ, ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ ಎಂದು ಸಿಂಗಾಪುರದಲ್ಲಿರುವ ಅವರ ಪುತ್ರ ತೇಜಸ್ವಿ ಯಾದವ್ ಮಾಹಿತಿ ನೀಡಿದ್ದಾರೆ.
ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಲಾಲೂ ಅವರ ಅನಾರೋಗ್ಯ ಕಾರಣದಿಂದ ನ್ಯಾಯಾಲಯ ಅವರಿಗೆ ಜಾಮೀನು ನೀಡಿದೆ.