ಗುಂಡ್ಲುಪೇಟೆ : ತಾಲೋಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆಯೊಂದು ಸಾವನ್ನಪ್ಪಿರುವ ಘಟನೆ ತಡರಾತ್ರಿ ನಡೆದಿದೆ. ಘಟನೆಗೆ ಸಂಬAಧಿಸಿದAತೆ ಲಾರಿ ಚಾಲಕ ಅಯ್ಯಸ್ವಾಮಿ ಹಾಗೂ ಕ್ಲೀನರ್ ಆನಂದ್ ಕುಮಾರ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಕೇರಳಕ್ಕೆ ಹೋಗುವ ರಾಷ್ಟಿçÃಯ ಹೆದ್ದಾರಿ ೭೬೬ ರಲ್ಲಿ ಮಂಗಳವಾರ ರಾತ್ರಿ ೮ ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಕೇರಳ ಕಡೆಯಿಂದ ಬರುತ್ತಿದ್ದ ತಮಿಳುನಾಡು ನೋಂದಣಿಯ ಲಾರಿ ಆನೆಗೆ ಡಿಕ್ಕಿ ಹೊಡೆದಿದೆ. ಮದ್ದೂರು ವಲಯದಲ್ಲಿ ಈ ಅಪಘಾತ ಸಂಭವಿಸಿದ್ದು, ರಾತ್ರಿ ೯ ಗಂಟೆಯ ನಂತರ ಈ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ನಿಷೇಧವಿದ್ದು, ಅದಕ್ಕೂ ಮೊದಲೇ ಈ ಘಟನೆ ನಡೆದಿದೆ. ಮೃತ ಆನೆಯನ್ನು ಕ್ರೇನ್ ಮೂಲಕ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
0 ಕಾಮೆಂಟ್‌ಗಳು