ಕಾಡುಕೊತ್ತನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ನವೀನ್, ಉಪಾಧ್ಯಕ್ಷೆಯಾಗಿ ಶಾರದಮ್ಮ ಆಯ್ಕೆ

ಟಿ.ಬಿ.ಸಂತೋಷ, ಮದ್ದೂರು
ಮದ್ದೂರು: ತಾಲೂಕಿನ ಕಾಡುಕೋತ್ತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ನವೀನ್ ಮತ್ತು ಉಪಾಧ್ಯಕ್ಷೆಯಾಗಿ ಶಾರದಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
ಈ ಹಿಂದೆ ಅಧ್ಯಕ್ಷರಾಗಿದ್ದ ದಯಾನಂದ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಚುನಾವಣೆ ನಡೆಸಲಾಯಿತು. 
ಒಟ್ಟು 16 ಸದಸ್ಯರ ಪೈಕಿ 9 ಮತಗಳನ್ನು ಪಡೆದು ನವೀನ್ ತಮ್ಮ ಪ್ರತಿಸ್ಪರ್ಧಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಮಂಗಳಮ್ಮ ಅವರನ್ನು 2 ಮತಗಳ ಅಂತರದಿಂದ ಸೋಲಿಸಿ ಅಧ್ಯಕ್ಷರಾಗಿ ಚುನಾಯಿತರಾದರು.
ಉಪಾಧ್ಯಕ್ಷ ಸ್ಥಾನಕ್ಕೆ ಶಾರದಮ್ಮ ಒಬ್ಬರೇ ನಾಮಪತ್ರ ಸಲ್ಲಸಿದ ಕಾರಣ ಅವರು ಅವಿರೋಧವಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ವೈ.ಪಿ..ರುದ್ರಯ್ಯ, ರಾಜು, ಸುನಂದಾ, ಸಿಂಧೂ, ಕೆಂಪರಾಜು, ಲೋಕೇಶ್, ಎಂಪಿಸಿಎಸ್ ಅಧ್ಯಕ್ಷ ರಾಮಣ್ಣ, ಮಾಜಿ ಅಧ್ಯಕ್ಷ ಕಿರಣ್, ಗ್ರಾಮದ ಮುಖಂಡರಾದ ರಘು ಮುಂತಾದದವರು ಇದ್ದರು. ಚುನಾವಣಾ ಅಧಿಕಾರಿಯಾಗಿ ಪ್ರಶಾಂತ್ ಕಾರ್ಯನಿರ್ವಹಿಸಿದರು .



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು