ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ನಿಂದ ಭಾರತಿನಗರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಡಿಸೆಂಬರ್ 08, 2022
-ಟಿ.ಬಿ.ಸಂತೋಷ, ಮದ್ದೂರು ಮದ್ದೂರು: ತಾಲೂಕಿನ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೆ.ಎಂ.ದೊಡ್ಡಿ ಕೇಂಬ್ರಿಡ್ಜ್ ಶಾಲಾ ಆವರಣದಲ್ಲಿ 'ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್' ವತಿಯಿಂದ ಏರ್ಪಡಿಸಿದ್ದ "ಪ್ರತಿಭಾ ಪುರಸ್ಕಾರ "ಕಾರ್ಯಕ್ರಮವನ್ನು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಕದಲೂರು ಉದಯ್ ಉದ್ಘಾಟಿಸಿದರು. ೫ರಿಂದ ೧೦ನೇ ತರಗತಿಯಲ್ಲಿ ಉನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದ ಬಳಿಕ, ಟ್ರಸ್ಟ್ ಅಧ್ಯಕ್ಷ ಕೆ.ಎಂ ಉದಯ್ ಮಾತನಾಡಿ, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಉತ್ತೇಜನ ಹಾಗೂ ಕಲಿಕೆಯಲ್ಲಿ ಸ್ಫೂರ್ತಿ ತುಂಬುವ ನಿಟ್ಟಿನಲ್ಲಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದರು. ತಾಲ್ಲೂಕಿನಲ್ಲಿ ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳ ನವೀಕರಣ, ಶಾಲೆಗಳ ಉನ್ನತಿಕರಣ, ವಿವಿಧ ಸಲಕರಣೆಗಳ ವಿತರಣೆ ಸೇರಿದಂತೆ ಮಕ್ಕಳಿಗೆ ಉಚಿತ ಬ್ಯಾಗ್, ನೋಟ್ ಬುಕ್ ವಿತರಣೆ ಮಾಡುವ ಮೂಲಕ ಮಕ್ಕಳ ವಿದ್ಯಾಭಾಸಕ್ಕೆ ನೆರೆವಾಗಿದ್ದೇನೆ ಎಂದರು. ಅಲ್ಲದೆ, ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲಾ ಮಕ್ಕಳ ಸಂಪೂರ್ಣ ಶಾಲಾ ಶುಲ್ಕವನ್ನು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಭರಿಸಲಾಗುವುದು. ಜತೆಗೆ ಶಾಲಾ ಶಿಕ್ಷಕರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಇದೆ ಡಿ.೨೫ ರಂದು ಮದ್ದೂರಿನಲ್ಲಿ "ಗುರುವಂದನಾ" ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಕೆ.ಎA.ದೊಡ್ಡಿ ಗ್ರಾಪಂ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಕದಲೂರು ಉದಯ್ ಅವರು ತಮ್ಮ ದೂರದೃಷ್ಟಿಯಿಂದ ನಮ್ಮ ತಾಲ್ಲೂಕನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಮಾಡುತ್ತಿದ್ದಾರೆ ಎಂದರು. ಗ್ರಾಪA ಸದಸ್ಯರಾದ ಸೌಮ್ಯ ಪುಟ್ಟಸ್ವಾಮಿ, ಶ್ರೀನಿವಾಸ, ಮುಖಂಡರಾದ ಸುರೇಶ್, ಲಕ್ಷಣ, ಸುರೇಶ್, ಕಬ್ಬಾರೆ ಶಂಕರ್, ಚಿದಂಬರ ಮೂರ್ತಿ, ಗೋವಿಂದ, ಹೊಟ್ಟೆ ನವೀನ್ ಮುಂತಾದವರು ಇದ್ದರು.
0 ಕಾಮೆಂಟ್‌ಗಳು