ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು: ಭೀಕರ ಅಪಘಾತ, ನಾಲ್ವರ ಸಾವು, ಹಲವರಿಗೆ ಗಾಯ

ಮಂಡ್ಯ:  ವೇಗವಾಗಿ ಚಲಿಸುತ್ತಿದ್ದ ಇನೋವಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಎದುರಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಅಪ್ಪಳಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿ ಬಳಿ ನಡೆದಿದೆ.
ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ರಸ್ತೆ ಮಧ್ಯದ ವಿಭಜಕಕ್ಕೆ ಡಿಕ್ಕಿ ಹೊಡೆದು ಮತ್ತೊಂದು ರಸ್ತೆಯಲ್ಲಿ  ಬೆಂಗಳೂರಿನಿಂದ ಹಾಸನ ಕಡೆಗೆ ಹೋಗುತ್ತಿದ್ದ ಕಾರಿಗೆ ಅಪ್ಪಳಿಸಿದ ಪರಿಣಾಮ ದುರ್ಘಟನೆ ನಡೆದಿದೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ಸಮೀಪದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು.

ಅಪಘಾತದಲ್ಲಿ ಮೃತಪಟ್ಟವರ ಶವಗಳನ್ನು ಆದಿಚುಂಚನಗಿರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.
ಅಪಘಾತದಲ್ಲಿ ಸಾವನಪ್ಪಿದವರ ಹೆಸರುಗಳು ತಿಳಿದು ಬಂದಿಲ್ಲ. ಸ್ಥಳಕ್ಕೆ ಬೆಳ್ಳೂರು ಪೊಲೀಸರು ಧಾವಿಸಿ, ಪರಿಶೀಲನೆ ನಡೆಸಿದರು. ಸಂಬಂಧ ಬೆಳ್ಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು