ತಿ.ನರಸೀಪುರ :ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನೆರಗ್ಯಾತನಹಳ್ಳಿ ಗ್ರಾಮದ ಬಳಿ ನಡೆದಿದೆ.
ಹುಳುಕನಹುಂಡಿ ಗ್ರಾಮದ ವಿನಯ್ (23)ವರ್ಷ ಮೃತ ದುರ್ದೈವಿ.
ಹಿಂಬದಿ ಬೈಕ್ ಸವಾರನಿಗೂ ಗಂಭೀರ ಗಾಯವಾಗಿದ್ದು ಚಿಕಿತ್ಸೆಗೆ ದಾಖಲಿಸಲಾಗಿದೆ.
ಸ್ಥಳದಲ್ಲಿ ಮೃತ ಯುವಕನ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.
ಸ್ಥಳಕ್ಕೆ ನರಸೀಪುರ ಪೋಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮೃತ ವ್ಯಕ್ತಿ ವಿನಯ್ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು,
ತಿ.ನರಸೀಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
0 ಕಾಮೆಂಟ್‌ಗಳು