ಯಳಂದೂರು : ಮಹಿಳೆಯೊಬ್ಬರು ಆಟೋದಿಂದ ಕೆಳಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹೊನ್ನೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಹೊನ್ನೂರು ಗ್ರಾಮದ ದೊಡ್ಡಮ್ಮ(49) ಮೃತಪಟ್ಟವರು. ಗ್ರಾಮದಲ್ಲಿ ಮೃತಪಟ್ಟಿದ್ದ ಪರಿಚಿತರ ಅಂತ್ಯಕ್ರಿಯೆ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಗ್ರಾಮದಲ್ಲಿ ಚಾಮುಂಡಮ್ಮ ಎಂಬ ಮಹಿಳೆ ಮೃತಪಟ್ಟಿದ್ದರು. ಇವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಗ್ರಾಮದ ಹೊರ ವಲಯದಲ್ಲಿರುವ ಸ್ಮಶಾನಕ್ಕೆ ಇವರು ತೆರಳಿದ್ದರು. ಮೃತರ ಅಂತ್ಯಕ್ರಿಯೆ ಮುಗಿಸಿಕೊಂಡು ಆಟೋದಲ್ಲಿ ಇವರು ವಾಪಸ್ಸಾಗುತ್ತಿದ್ದ ವೇಳೆ ಚಾಲಕ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ ಈತನ ಅಜಾಗರೂಕತೆಯಿಂದ ಆಟೋ ವೇಗವಾಗಿ ಚಲಿಸುತ್ತಿದ್ದು ಆಟೋದ ಬದಿಯಲ್ಲೇ ಕುಳಿತಿದ್ದ ದೊಡ್ಡಮ್ಮ ಕೆಳಕ್ಕೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಇವರನ್ನು ಯಳಂದೂರಿನ ಸಾರ್ವಜನಿಕರ ಆಸತ್ರೆಗೆ ಕರೆತರುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಸಲಾಗಿದ್ದು, ಪೊಲೀಸರು ಆಟೋವನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.
0 ಕಾಮೆಂಟ್‌ಗಳು