ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿದ ಶಾಸಕ ಡಿ.ಸಿ ತಮ್ಮಣ್ಣ

ಮದ್ದೂರು: ತಾಲೂಕಿನ ಮೆಣಸಗೆರೆ ಗ್ರಾಮದ ಪರಿಶಿಷ್ಟ ಸಮುದಾಯದ ಕಾಲೊನಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ಸಿ ತಮ್ಮಣ್ಣ ಶುಕ್ರವಾರ ಭೂಮಿಪೂಜೆ ಸಲ್ಲಿಸಿದರು 
ಅನಂತರ ಅವರು ಮಾತನಾಡಿ, ಕರ್ನಾಟಕ ರಾಜ್ಯ ಗ್ರಾಮೀಣ ಅಭಿವೃದ್ಧಿ ನಿಗಮದ ವತಿಯಿಂದ ಮೊದಲ ಹಂತದ ಕಾಮಗಾರಿಗೆ 20 ಲಕ್ಷ ರೂ ಮಂಜೂರಾಗಿದೆ. ಇನ್ನೂ ಹತ್ತು ಲಕ್ಷ ರೂ ಹೆಚ್ಚುವರಿಯಾಗಿ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುತ್ತೇನೆ. ಗುತ್ತಿಗೆದಾರರು ಕಾಮಗಾರಿಯ ಗುಣಮಟ್ಟ ಕಾಪಾಡಬೇಕು ಎಂದರು
ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಚಿಕ್ಕ ತಿಮ್ಮೇಗೌಡ, ಗ್ರಾಪಂ ಅಧ್ಯಕ್ಷ ಉಮೇಶ್, ಮಾಜಿ ಅಧ್ಯಕ್ಷ ಮಹದೇವ, ಉಪಾಧ್ಯಕ್ಷೆ ಶಿಲ್ಪಾ ಶ್ರೀನಿವಾಸ, ಸದಸ್ಯರಾದ ಅಜಯ್, ಲಲಿತಮ್ಮ, ಶಿವಲಿಂಗಯ್ಯ, ಮುಖಂಡರಾದ ಕೆ.ಟಿ.ಸುರೇಶ್, ವಿನು,  ಕರಡಕೆರೆ ಯೋಗೇಶ್, ಮಹೇಂದ್ರ ಇತರರು ಇದ್ದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು