ದಲಿತ ಸಂಘಟನೆಗಳ ಐಕ್ಯತಾ ಸಮಾವೇಶಕ್ಕೆ ಚಾಲನೆ : ದಲಿತರ ಸಾಂಸ್ಕøತಿಕ ಪ್ರತಿರೋಧದಲ್ಲಿ ಲಕ್ಷಾಂತರ ಜನ ಭಾಗಿ
ಡಿಸೆಂಬರ್ 06, 2022
ಬೆಂಗಳೂರು : ಡಾ.ಬಿ.ಆರ್.ಅಂಬೇಡ್ಕರ್ ಅವರ 66ನೇ ಪರಿನಿಬ್ಬಾಣ ದಿನದ ಅಂಗವಾರಿ ಇಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶದಲ್ಲಿ ಭಾರಿ ಜನಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು ಕಂಡುಬಂತು. ಸ್ವಾತಂತ್ರ್ಯ, ಸಮಾನತೆ, ಸಹೋದತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ನಾಶ ಮಾಡಲಾಗುತ್ತಿದ್ದು, ಇಂತಹ ಶಕ್ತಿಗಳ ವಿರುದ್ಧ ದೊಡ್ಡಮಟ್ಟದ ಹೋರಾಟ ನಡೆಸಲಾಗುತ್ತಿದೆ ಎಂದು ಹಿರಿಯ ರಂಗಕರ್ಮಿ ರಂಗಾಯಣ ಮಾಜಿ ನಿರ್ದೇಶಕ ಜನಾರ್ಧನ್(ಜನ್ನಿ) ಹೇಳುವ ಮೂಲಕ ಸಾಂಸ್ಕøತಿಕ ಕಾರ್ಯಕ್ರಮ ಪ್ರಾರಂಭಿಸಿ ಐಕ್ಯತಾ ಸಮಾವೇಶಕ್ಕೆ ಚಾಲನೆ ನೀಡಿದರು. ಮದ್ಯಾಹ್ನ 12.30ರ ಹೊತ್ತಿಗೆ ಬೆಂಗಳೂರಿನ ನ್ಯಾಷನಲ್ ಕಾಲೇಜು ಆವರಣದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ದಸಂಸ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಚಾಮರಾಜನಗರ, ನಂಜನಗೂಡು, ಮೈಸೂರು, ಮಂಡ್ಯ, ಕೊಡಗು, ಮುಂತಾದ ಕಡೆಗಳಿಂದಲೂ ನೂರಾರು ಬಸ್‍ಗಳ ಮೂಲಕ ಸಾವಿರಾರು ಜನರು ಆಗಮಿಸಿದ್ದರು. ಈ ಐಕ್ಯತಾ ಸಮಾವೇಶಕ್ಕೆ ಮೈಸೂರು, ಚಾಮರಾಜನಗರ ಜಿಲ್ಲೆಗಳಿಂದ ನೂರಾರು ಬಸ್‍ಗಳ ಮೂಲಕ ಸಾವಿರಾರು ಜನರು ಆಗಮಿಸಿದ್ದು ಕಂಡುಬಂತು.
0 ಕಾಮೆಂಟ್‌ಗಳು