ಹಿರಿಯ ವಿದ್ಯಾರ್ಥಿಗಳಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ
ಡಿಸೆಂಬರ್ 17, 2022
ಟಿ.ಬಿ.ಸಂತೋಷ, ಮದ್ದೂರು ಮದ್ದೂರು: ತಾಲೂಕಿನ ಮಡೇನಹಳ್ಳಿ ಗ್ರಾಮದ ಹಿರಿಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಟೈ ಗಳನ್ನು ವಿತರಣೆ ಮಾಡಲಾಯಿತು. ಹಿರಿಯ ವಿದ್ಯಾರ್ಥಿಗಳ ಬಳಗದ ಉಪಾಧ್ಯಕ್ಷ, ಪಿಎಲ್‍ಡಿ ಬ್ಯಾಂಕ್ ಮಾಜಿ ನಿರ್ದೇಶಕ ಸಿದ್ದರಾಮು ಮಾತನಾಡಿ, ತಾವು ಓದಿದ ಶಾಲೆಯನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹಲವಾರು ವರ್ಷಗಳಿಂದ ಇಲ್ಲಿನ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ನೋಟ್‍ಬುಕ್‍ಗಳನ್ನು ಕೊಡುತ್ತಾ ಬಂದಿದ್ದೇವೆ ಎಂದರು. ಈ ವೇಳೆ ಮಡೇನಹಳ್ಳಿ ಗ್ರಾಮಸ್ಥರು ಮುಂದಿನ ವರ್ಷದಿಂದ ಈ ಶಾಲೆಗೆ ಹೆಚ್ಚಿನ ಮಕ್ಕಳನ್ನು ಸೇರಿಸುವುದಾಗಿ ಹೇಳಿದರು. ಸಮಾಜ ಸೇವಕ ಸಿದ್ಧಲಿಂಗ ಪ್ರಸಾದ್, ಎಸ್‍ಡಿಎಂಸಿ ಅಧ್ಯಕ್ಷ ಶಶಿಧರ, ಗ್ರಾಪಂ ಸದಸ್ಯರಾದ ಸಿದ್ದಲಿಂಗಸ್ವಾಮಿ, ಉಮಾಶಂಕರ್, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಶಿವಮಾದೇಗೌಡ, ಕಾರ್ಯದರ್ಶಿ ಮಲ್ಲಿಕಾರ್ಜುನ, ಮುಖ್ಯ ಶಿಕ್ಷಕಿ ಗೀತಮ್ಮ ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು.
0 ಕಾಮೆಂಟ್‌ಗಳು