ಮದ್ದೂರು : ಅರುವನಹಳ್ಳಿ ಗ್ರಾಮದಲ್ಲಿ ಸಮಸ್ಯೆಗಳು ನೂರಾರು : ಪಂಚಾಯ್ತಿ ನಿರ್ಲಕ್ಷ್ಯ ಆರೋಪ
ಡಿಸೆಂಬರ್ 13, 2022
ಟಿ.ಬಿ.ಸಂತೋಷ, ಮದ್ದೂರು ಮದ್ದೂರು: ತಾಲೂಕಿನ ಕೂಳಗೆರೆ ಗ್ರಾಪಂ ವ್ಯಾಪ್ತಿಯ ಅರುವನಹಳ್ಳಿ ಗ್ರಾಮದ ದಲಿತ ಕಾಲೂನಿಯ ಜನರು ಮೂಲಭೂತ ಸಮಸ್ಯೆಗಳಿಂದ ವಂಚಿತರಾಗಿದ್ದು, ಈ ಸಂಬಂಧ ಗ್ರಾಮಸ್ಥರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿ.15 ರಂದು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಿದ್ದಾರೆ. ಇಲ್ಗಿನ ದಲಿತ ಕಾಲೂನಿಯ ಚರಂಡಿಗಳು ಮಳೆ ನೀರಿನಿಂದ ಭರ್ತಿಯಾಗಿ ಗಬ್ಬು ನಾರುತ್ತಿದ್ದು, ಪಂಚಾಯ್ತಿಯ ಸೂಕ್ತ ನಿರ್ವಹಣೆ ಇಲ್ಲದ ಎಲ್ಲೆಂದರಲ್ಲಿ ನೀರು ತುಂಬಿಕೊಂಡು ವಾಸನೆಯಿಂದ ಕೂಡಿದೆ. ಇದರಿಂದ ಸೊಳ್ಳೆಗಳು ಹೆಚ್ಚಾಗಿ ಸಾಂಕ್ರಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಬಗ್ಗೆ ಗ್ರಾಮಸ್ಥರು ಪಂಚಾಯಿತಿ ಅಧಿಕಾರಿಗಳಿಗೆ ಹಲವಾರು ಬಾರಿ ದೂರು ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
0 ಕಾಮೆಂಟ್‌ಗಳು