ರಾಮಾಪುರದಲ್ಲಿ ಎಸ್‍ಕೆಡಿಆರ್‍ಡಿಪಿ ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ, ಸಾಧನಾ ಸಮಾವೇಶ

ಶಾರುಕ್ ಖಾನ್, ಹನೂರು
ಹನೂರು: ತಾಲೂಕಿನ ರಾಮಾಪುರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಾಧನ ಸಮಾವೇಶ ಕಾರ್ಯಕ್ರಮ ನಡೆಯಿತು.
ಸಮಾರಂಭದಲ್ಲಿ ಭಾಗವಹಿಸಿದ್ದ ಹನೂರು ಶಾಸಕ ಆರ್.ನರೇಂದ್ರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯು ಮಹಿಳೆಯರಿಗೆ ಶಿಸ್ತು, ಜ್ಞಾನ ನೀಡುವುದರ ಜತೆಗೆ ಆರ್ಥಿಕವಾಗಿ ತಮ್ಮ ಬದುಕು ಸದೃಢವಾಗಿಸಲು ಸಾಲಸೌಲ;ಭ್ಯ ನೀಡುತ್ತಿದೆ. ಇದು ಮಹಿಳೆಯರ ಸಾಮಾಜಿಕ ಬದಲಾವಣೆಗೆ ಸಹಕಾರಿಯಾಗಿದೆ ಎಂದು ತಿಳಿಸಿದರು.
ಜಿಲ್ಲಾ ನಿರ್ದೇಶಕಿ ಲತಾ ಬಂಗೇರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಿರ್ಗತಿಕರಿಗೆ ಮಾಶಾಸನ, ಅಂಗವಿಕಲರಿಗೆ ಸಲಕರಣೆ ನೀಡುವುದರ ಜತೆಗೆ ಯೋಜನೆಯಿಂದ ಸಿಗುವಂತಹ ಅನುಕೂಲಗಳನ್ನು ಮಾಡಿಕೊಡುತ್ತಿದೆ ಎಂದರು.
ಯೋಜನೆಯ ಸದಸ್ಯರುಗಳು ತಮ್ಮ ವ್ಯವಹಾರಗಳಲ್ಲಿ ಶಿಸ್ತು, ಪ್ರಾಮಾಣಿಕತೆ ಕಾಪಾಡಿಕೊಳ್ಳಬೇಕೆಂದು ಸಲಹೆ ನೀಡಿದರು.
ಜಿಪಂ ಮಾಜಿ ಉಪಾಧ್ಯಕ್ಷ ಬಸವರಾಜು, ಗ್ರಾಪಂ ಅಧ್ಯಕ್ಷೆ ದಾಕ್ಷಾಯಿಣಿ, ಸಹಾಯಕ ಅರಣ್ಯ ರಕ್ಷಣಾಧಿಕಾರಿ ಭಾಗ್ಯಲಕ್ಷ್ಮಿ, ಯೋಜನಾಧಿಕಾರಿ ಪ್ರವೀಣ್ ಕುಮಾರ್, ಮೆಲ್ವಿಚಾರಕರು, ಸೇವಾ ಪ್ರತಿನಿಧಿಗಳು ಇದ್ದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು