ಬನ್ನೂರು ಬಳಿ ಕೊಟ್ಟಿಗೆಯಲ್ಲಿದ್ದ ಮೇಕೆ ಮೇಲೆ ಚಿರತೆ ದಾಳಿ : ಗ್ರಾಮಸ್ಥರ ಆತಂಕ

ಟಿ.ನರಸೀಪುರ: ತಾಲ್ಲೂಕಿನ ಬನ್ನೂರು ಹೋಬಳಿಯ ಯಾಚೇನಹಳ್ಳಿ ಗ್ರಾಮದಲ್ಲಿ ತಡರಾತ್ರಿ ರೈತ ರಮೇಶ್ ಎಂಬವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ ಮೇಕೆ ಮೇಲೆ ಚಿರತೆ ದಾಳಿ ಮಾಡಿರುವ ಬಗ್ಗೆ ವರದಿಯಾಗಿದೆ.
ವಿಷಯ ತಿಳಿಯುತ್ತಲೇ ಗ್ರಾಮಕ್ಕೆ ಶಾಸಕ ಎಂ.ಅಶ್ವಿನ್ ಕುಮಾರ್ ಭೇಟಿ ನೀಡಿ ಮಾಹಿತಿ ಪಡೆದರು. ಅಲ್ಲದೇ ಅರಣ್ಯ ಇಲಾಖೆಯವರೂ ಸಹ ಗ್ರಾಮದಲ್ಲೇ ಬೀಡು ಬಿಟ್ಟಿದ್ದಾರೆ. ಚಿರತೆ ಸೆರೆಯ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಳಿಸಲಾಗಿದೆ. ಈ ವೇಳೆ ಶಾಸಕರೂ ಸಹ ನರಭಕ್ಷಕ ಚಿರತೆಯ ಸೆರೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ತಾಕೀತು ಮಾಡಿದರು
.