ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ಎನ್‍ಎಸ್‍ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಡಿಸೆಂಬರ್ 28, 2022
ನಂಜನಗೂಡು: ಕಾಲೇಜಿನಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಎನ್‍ಎಸ್‍ಯುಐ ನೇತೃತ್ವದಲ್ಲಿ ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಸರಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಸೌಲಭ್ಯಗಳು ದೊರಕುತ್ತಿಲ್ಲ. ಕುಡಿಯುವ ನೀರು, ಶೌಚಾಲಯ, ಬಸ್‍ಪಾಸ್, ಟೂಲ್‍ಕಿಟ್, ಲ್ಯಾಪ್‍ಟಾಪ್ ಯಾವುದೂ ಇಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಆಡಳಿತ ಮಂಡಳಿಯ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು. ನಗರದ ಹುಲ್ಲಹಳ್ಳಿ ವೃತ್ತದಿಂದ ಆರಂಭವಾದ ಪ್ರತಿಭಟನೆ ತಾಲ್ಲೂಕು ಕಚೇರಿಗೆ ಸಾಗಿ ಮನವಿ ಸಲ್ಲಿಸಲಾಯಿತು.
0 ಕಾಮೆಂಟ್‌ಗಳು