ಹನೂರು ಪಟ್ಟಣದಲ್ಲಿ ಕೆಎಸ್‍ಆರ್‍ಟಿಸಿ ಬಸ್ ತಡೆದು ವಿದ್ಯಾರ್ಥಿಗಳ ಭಾರಿ ಪ್ರತಿಭಟನೆ
ಡಿಸೆಂಬರ್ 24, 2022
ಶಾರುಕ್ ಖಾನ್, ಹನೂರು
ಹನೂರು: ಶಾಲಾ ಕಾಲೇಜುಗಳಿಗೆ ತೆರಳಲು ಸಮರ್ಪಕ ಬಸ್ ವ್ಯವಸ್ಥೆ ಇಲ್ಲ, ಕೆಲವು ಬಸ್ ಬಂದರೂ ನಿಲ್ಲಿಸುವುದಿಲ್ಲ. ಕೂಡಲೇ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ನೂರಾರು ವಿದ್ಯಾರ್ಥಿಗಳು ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್‍ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ದಿನನಿತ್ಯ ದೂರದ ಹಳ್ಳಿಗಳಿಂದ ಬಂದ ನಾವುಗಳು ಕೊಳ್ಳೇಗಾಲದ ಶಾಲಾ ಕಾಲೇಜಿಗೆ ತೆರಳಲು ಬಸ್‍ಗಾಗಿ ಬೆಳಿಗ್ಗೆಯಿಂದಲೂ ಕಾಯುತ್ತಿದ್ದೇವೆ. ಯಾವುದೇ ಬಸ್‍ಗಳು ನಿಲ್ಲಿಸುತ್ತಿಲ್ಲ. ಜತೆಗೆ ಬಸ್ ನಿರ್ವಾಹಕರು ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಬಸ್ ಬಿಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ. ಎಕ್ಸ್‍ಪ್ರೆಸ್ ಮತ್ತು ವೇಗದೂತ ಬಸ್‍ಗಳಲ್ಲಿ ಪಾಸ್ ಹೊಂದಿರುವ ವಿದ್ಯಾರ್ಥಿಗಳ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದು ಕುಳಿತರು. ಸ್ಥಳಕ್ಕೆ ಬಂದ ಅಧಿಕಾರಿಗಳು ಬಸ್ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.
0 ಕಾಮೆಂಟ್‌ಗಳು