ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಹರೀಶ್‍ಗೌಡ ಅವರಿಗೆ ಟಿಕೇಟ್ ಕೊಟ್ರೆ ಗೆಲುವು ಖಚಿತ : ಜಮೀರ್ ಅಹಮದ್

ಮೈಸೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ಚಾಮರಾಜ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ಹರೀಶ್ ಗೌಡ ಅವರಿಗೆ ಟಿಕೇಟ್ ನೀಡಿದರೆ ಗೆಲುವು ಖಚಿತ ಎಂದು ಮಾಜಿ ಸಚಿವ, ಶಾಸಕ ಬಿ.ಝೆಡ್ ಜಮೀರ್ ಅಹಮದ್ ಹೇಳಿದ್ದಾರೆ.
ಶನಿವಾರ ಮೈಸೂರಿನಲ್ಲಿ ಮಾತನಾಡಿದ ಅವರು, 2018ರ ಚುನಾವಣೆಯಲ್ಲಿ ಹರೀಶ್ ಗೌಡ ಅವರಿಗೆ ಕಾಂಗ್ರೆಸ್ ಪಕ್ಷದ ಟಿಕೇಟ್ ಕೈತಪ್ಪಿತ್ತು. ಪಕ್ಷೇತರರಾಗಿ ಸ್ಪರ್ಧಿಸಿ 21 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ತಮ್ಮ ಶಕ್ತಿಯನ್ನು ಪ್ರದರ್ಶಿಸಿದ್ದಾರೆ.
ಈ ಬಾರಿ ಪಕ್ಷ ಅವರಿಗೆ ಟಿಕೇಟ್ ನೀಡಿದ್ದಲ್ಲಿ ನಾನೇ ಖುದ್ದು ಪ್ರಚಾರಕ್ಕೆ ಬಂದು ಹರೀಶ್ ಗೌಡ ಅವರನ್ನು ಗೆಲ್ಲಿಸುತ್ತೇನೆ. ಅವರ ಗೆಲುವು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು. 




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು