೧೨ಕ್ಕೆ ಮುಖ್ಯಮಂತ್ರಿ ಭೇಟಿ : ಸಚಿವ ಸೋಮಣ್ಣರಿಂದ ಸಿದ್ಧತೆ ಪರಿಶೀಲನೆ


 ಶಾರುಕ್‌ ಖಾನ್‌, ಹನೂರು

ಹನೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹನೂರು ಪಟ್ಟಣಕ್ಕೆ ಭೇಟಿ ನೀಡಲಿರುವ ಹಿನ್ನಲೆ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಬುಧವಾರ ಪಟ್ಟಣದ ಮಹದೇಶ್ವರ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಸಿದರು.
ಈ ವೇಳೆ ಅವರು ಮಾತನಾಡಿ, ಸಿಎಂ ಡಿ, 12ರಂದು ಪಟ್ಟಣಕ್ಕೆ ಭೇಟಿ ನೀಡಿ ಹಲವು ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಕೆಲವು ಯೋಜನೆಗಳನ್ನು ಉದ್ಘಾಟನೆ ಮಾಡಲಿದ್ದಾರೆ. ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಪಕ್ಷದ ಕಾಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹೇಳಿದರು. 
ಡಬಲ್ ಇಂಜಿನ್ ಸರ್ಕಾರ ಸಾರ್ವಜನಿಕರ ಅನುಕೂಲಕ್ಕೆ ಹಲವಾರು ಜನಪರ ಯೋಜನೆಗಳನ್ನು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರು ಎಲ್ಲಾ ವರ್ಗದ ಜನರಿಗೂ ಸವಲತ್ತು ತಲುಪುವಂತೆ  ಅಭಿವೃದ್ಧಿ ಕಾರ್ಯಕ್ರಮವನ್ನು ಜಾರಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಚಾಮರಾಜನಗರ ಜಿಲ್ಲೆಗೆ 1497 ಕೋಟಿ ಅನುದಾನ ನೀಡಿ ವಿವಿಧ ಕಾಮಗಾರಿಗಳಿಗೆ  ಚಾಲನೆ ನೀಡಲಿದ್ದಾರೆ ಎಂದರು.
ಶಾಸಕ ಎನ್.ಮಹೇಶ್, ಬರ ಪರಿಹಾರ ಸಮಿತಿಯ ರಾಮಚಂದ್ರ, ಬಿಜೆಪಿ ಜಿಲ್ಲಾ ಅಧ್ಯಕ್ಷ ಆರ್.ಸುಂದರ್‌, ಉಪಾಧ್ಯಕ್ಷ, ದತ್ತೇಶ್‌ ಕುಮಾರ್, ಡಾ.  ಪ್ರೀತನ್ ನಾಗಪ್ಪ, ಬಿಜೆಪಿ ಒಬಿಸಿ ಕಾರ್ಯಕಾರಿಣಿ ಸದಸ್ಯ ವೆಂಕಟೇಶ್, ಮಂಗಲ ಶಿವಕುಮಾರ್, ಮುಖಂಡ ನಿಶಾಂತ್, ಮಂಡಲ ಅಧ್ಯಕ್ಷ ಸಿದ್ದಪ್ಪ ಸೇರಿದಂತೆ ಇತರರು ಹಾಜರಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು