ಎಸ್.ಎಂ.ಶಂಕರ್ ಮೆಮೋರಿಯಲ್ ಟ್ರಸ್ಟ್ ನಿಂದ ಉಚಿತವಾಗಿ ಹಾಲಿನ ಕ್ಯಾನ್ ವಿತರಣೆ
ಡಿಸೆಂಬರ್ 15, 2022
ಟಿ.ಬಿ.ಸಂತೋಷ, ಮದ್ದೂರು ಮದ್ದೂರು: ತಾಲೂಕಿನ ತೊರೆಬೊಮ್ಮನಹಳ್ಳಿ ಗ್ರಾಮದಲ್ಲಿ ಎಸ್.ಎಂ.ಶಂಕರ್ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಹೈನುಗಾರರಿಗೆ ಉಚಿತ ಹಾಲಿನ ಕ್ಯಾನ್ ಗಳನ್ನು ಟ್ರಸ್ಟ್ ಅಧ್ಯಕ್ಷ ಕೆಪಿಸಿಸಿ ಸದಸ್ಯ ಗುರುಚರಣ್, ವಿಧಾನ ಪರಿಷತ್ ಸದಸ್ಯರುಗಳಾದ ಮಧು ಜಿ. ಮಾದೇಗೌಡ, ದಿನೇಶ್ ಗೂಳಿಗೌಡ ಅವರು ವಿತರಣೆ ಮಾಡಿದಾದರು ಈ ಸಂದರ್ಭದಲ್ಲಿ ಎಂಎಲ್‍ಸಿ ದಿನೇಶ್ ಗೂಳಿ ಗೌಡ ಮಾತನಾಡಿ, ಬಿಜೆಪಿ ಸರ್ಕಾರ ಹೈನುಗಾರರಿಗೆ ಅನ್ಯಾಯವೆಸಗಿದೆ. ಹಾ ಲಿನ ದರ ಏರಿಕೆ ಮಾಡಿಲ್ಲ. 55 ಕೋಟಿ ರೂ. ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ. ಹಾಲಿನ ಪ್ರೋತ್ಸಾಹ ಧನವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ನಾನು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದರು. ಅಲ್ಲದೆ ಶೀಘ್ರವಾಗಿ ಭತ್ತ ಖರೀದಿ ಕೇಂದ್ರ ತೆರೆಯಬೇಕು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಖಚಿತವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಗುರುಚರಣ್ ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು. ಎಂಎಲ್‍ಸಿ ಮಧು ಜಿ ಮಾದೇಗೌಡ ಮಾತಾನಾಡಿ, ಹೈನುಗಾರರ ಅನುಕೂಲಕ್ಕಾಗಿ ಗುರುಚರಣ್ ಅವರು ಕ್ಷೇತ್ರದಾದ್ಯಂತ ಉಚಿತವಾಗಿ ಹಾಲಿನ ಕ್ಯಾನ್ ವಿತರಣೆ ಮಾಡುತ್ತಿದ್ದಾರೆ. ಇವರನ್ನು ಎಲ್ಲರೂ ಬೆಂಬಲಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಅವರು ತೊರೆಬೊಮ್ಮನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧನ ಸಹಾಯ ಮಾಡಿದರು. ಕೆಪಿಸಿಸಿ ಸದಸ್ಯ ಗುರುಚರಣ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದೇಶ್, ಕದಲೂರು ರಾಮಕೃಷ್ಣ, ನಾಗೇಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ್, ಡೇರಿ ಅಧ್ಯಕ್ಷ ಶ್ರೀಕಂಠೇಗೌಡ, ಉಪಾಧ್ಯಕ್ಷ ಮೋಹನ್, ವೆಂಕಟೇಶ್, ಯೋಗೇಶ್, ತಿಮ್ಮೇಗೌಡ ಮುಂತಾದವರು ಇದ್ದರು.
0 ಕಾಮೆಂಟ್‌ಗಳು