ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕಾರು ಮೈಸೂರು ಸಮೀಪ ಕಡಕೋಳ ಬಳಿ ಅಪಘಾತ
ಡಿಸೆಂಬರ್ 27, 2022
ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸಹೋದರನ ಕಾರು ಅಪಘಾತವಾಗಿರುವ ಘಟನೆ ಮೈಸೂರು ತಾಲೂಕು ಕಡಕೊಳ ಬಳಿ ನಡೆದಿದೆ. ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತದಲ್ಲಿ ಜಖಂಗೊಂಡಿದ್ದು, ಪ್ರಹ್ಲಾದ್ ಮೋದಿ ಮೊಮ್ಮನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುವಾಗ ಘಟನೆ ನಡೆದಿದ್ದು, ಸ್ಥಳಕ್ಕೆ ಮೈಸೂರು ಎಸ್‍ಪಿ ಸೀಮಾ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಪಘಾತದ ಬಳಿಕ ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಪ್ರಧಾನಿ ಮೋದಿ ಅವರ ಸಹೋದರ ಪ್ರಲ್ಹಾದ್ ಮೋದಿ ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಕಡಕೋಳ ಹತ್ತಿರ ಅಪಘಾತಕ್ಕೀಡಾಗಿದೆ. ಆದರೆ, ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಆದರೆ, ಅವರ ಮೊಮ್ಮಗನ ಎಡಗಾಲಿಗೆ ಗಾಯವಾಗಿದೆ ಎಂದು ಅವರು ತಿಳಿಸಿದ್ದಾರೆ.
0 ಕಾಮೆಂಟ್‌ಗಳು