ಕಬ್ಬಿನ ಎಫ್‍ಆರ್‍ಪಿ ದರ ಪರಿಷ್ಕರಣೆಗೆ ಒತ್ತಾಯಿಸಿ ಕೆ.ಎಂ.ದೊಡ್ಡಿ ಬಂದ್‍ಗೆ ಅಭೂತಪೂರ್ವ ಬೆಂಬಲ

ಟಿ.ಬಿ.ಸಂತೋಷ, ಮದ್ದೂರು
ಮದ್ದೂರು : ಕಬ್ಬಿನ ಎಫ್‍ಆರ್‍ಪಿ ದರ ಪರಿಷ್ಕರಣೆ, ಹಾಲಿನ ಬೆಲೆಗೆ ಹೆಚ್ಚಳಕ್ಕೆ ಒತ್ತಾಯಿಸಿ ರೈತಸಂಘ ಕರೆ ನೀಡಿದ್ದ ಮಂಡ್ಯ ಬಂದ್‍ಗೆ ಕೆ.ಎಂ.ದೊಡ್ಡಿಯಲ್ಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು.
ವಿವಿಧ ಸಂಘ ಸಂಸ್ಥೆಗಳ ಬೆಂಬಲದೊಂದಿಗೆ ರೈತಸಂಘದ ಕಾರ್ಯಕರ್ತರು ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಭಾರತಿನಗರದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿ ಬೆಂಬಲ ನೀಡಿದರು.
ಜಿಪಂ ಮಾಜಿ ಸದಸ್ಯ ಅಣ್ಣುರು ರಾಜೀವ್ ಮಾತನಾ ಡಿ, ಸರ್ಕಾರ ರೈತರ ಬೇಡಿಕೆ ಈಡೇರಿಕೆಗೆ ನಿರ್ಲಕ್ಷ್ಯ ಮಾಡಿದೆ. ಟನ್ ಕಬ್ಬಿಗೆ 4,500 ರೂ. ಮತ್ತು ಲೀಟರ್ ಹಾಲಿಗೆ 40 ರೂ. ನೀಡಬೇಕೆಂದು ಒತ್ತಾಯಿಸಿದರು.
ರೈತ ಮುಖಂಡರಾದ ತೊರೆಚಾಕನಹಳ್ಳಿ ಶಂಕರೇಗೌಡ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಚಿಕ್ಕ ತಿಮ್ಮೇಗೌಡ, ವರ್ತಕರ ಸಂಘದ ಅಧ್ಯಕ್ಷ ಕೆಂಪೇಗೌಡ, ಕೆ.ಎಂ.ದೊಡ್ಡಿ ಗ್ರಾಪಂ ಅಧ್ಯಕ್ಷ ವೆಂಕಟೇಶ್, ಅಣ್ಣುರು ಗ್ರಾಪಂ ಅಧ್ಯಕ್ಷೆ ನಾಗಮಣಿ ಮಹೇಂದ್ರ, ಕ್ಯಾತಘಟ್ಟ ರವಿಕುಮಾರ್, ಪ್ರೊ.ಬಿ.ಬೋರೇಗೌಡ, ಗ್ರಾಪಂ ಸದಸ್ಯ ಚಂದ್ರಶೇಖರ್, ಶ್ರೀನಿವಾಸ, ಮಣಿಗೆರೆ ರಾಮಚಂದ್ರ, ಅಣ್ಣುರು ಸಿದ್ದಪ್ಪ, ಕಬ್ಬಾಳಯ್ಯ, ಕರಡಕೆರೆ ಯೋಗೇಶ್, ಗುಡಿಗೆರೆ ಬಸವರಾಜು, ಆಸರೆ ರಘು, ಪ್ರಜಾಪ್ರಿಯ ವೆಂಕಟೇಶ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು