ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಮಾಸಿಕ ಗೌರವಧನ ಹೆಚ್ಚಳ

ಬೆಂಗಳೂರು: ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಮಾಸಿಕ ಗೌರವಧನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ 3 ಸಾವಿರ ರೂ., ಉಪಾಧ್ಯಕ್ಷರಿಗೆ 2 ಸಾವಿರ ರೂ. ಹಾಗೂ ಸದಸ್ಯರಿಗೆ 1 ಸಾವಿರ ರೂ. ಮಾಸಿಕ ಗೌರವ ಧನವನ್ನು ಈ ವರೆಗೆ ನೀಡಲಾಗುತ್ತಿತ್ತು. ಆದರೆ ಇದೀಗ ಅಧ್ಯಕ್ಷರಿಗೆ 6 ಸಾವಿರ ರೂ., ಉಪಾಧ್ಯಕ್ಷ ರಿಗೆ 4 ಸಾವಿರ ರೂ. ಹಾಗೂ ಸದಸ್ಯರಿಗೆ 2 ಸಾವಿರ ರೂ. ಗೌರವ ಧನ ಹೆಚ್ಚಳ ಮಾಡಲಾಗಿದೆ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು