ಸಿದ್ದರಾಮಯ್ಯ-ಎಚ್. ವಿಶ್ವನಾಥ್ ಭೇಟಿ, ಕುತೂಹಲ ಕೆರಳಿಸಿದ ಹಳ್ಳಿ ಹಕ್ಕಿಯ ರಾಜಕೀಯ ನಡೆ

ಬೆಂಗಳೂರು: ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ಬಂದ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ವಿಶ್ವನಾಥ್ ಮತ್ತು ಸಿದ್ದರಾಮಯ್ಯ ಅವರ ಭೇಟಿ ಔಪಚಾರಿಕವಾದರೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿ ಕುತೂಹಲ ಕೆರಳಿಸಿದೆ. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದ ವಿಶ್ವನಾಥ್ ನಂತರ ಶಾಸಕರಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇತ್ತೀಚೆಗೆ ಅವರು ಬಿಜೆಪಿ ಮುಖಂಡರ ವಿರುದ್ಧವೇ ಮಾತನಾಡುತ್ತಿರುವುದರಿಂದ ಅವರು ಮತ್ತೇ ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತು ಕೇಳಿ ಬರುತ್ತಿರುವ ಬೆನ್ನಲ್ಲೇ ವಿಶ್ವನಾಥ್-ಸಿದ್ದರಾಮಯ್ಯ ಭೇಟಿ ಮಹತ್ವ ಪಡೆದಿದೆ.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಚ್.ಆಂಜನೇಯ, ಎಚ್.ಎಂ.ರೇವಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಧರ್ಮಸೇನಾ ಮೊದಲಾದವರು ಇದ್ದರು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು