ಅಲಗುಮೂಲೆ-ಎಡರಹಳ್ಳಿ ರಸ್ತೆಯ ತೋಟದ ಮನೆಯಲ್ಲಿ ವ್ಯಕ್ತಿಯ ಶವ ಪತ್ತೆ : ಕೊಲೆ ಶಂಕೆ


ಶಾರುಕ್ ಖಾನ್, ಹನೂರು

ಹನೂರು: ತಾಲೂಕಿನ ಅಲಗುಮೂಲೆ-ಎಡರಹಳ್ಳಿ ರಸ್ತೆಯ ತೋಟದ ಮನೆಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಈತನನ್ನು ಕೊಲೆ ಮಾಡಿದ್ದಾರೆ ಎಂದು ಮೃತನ ಅಣ್ಣ ಹನೂರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಹನೂರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೃತನ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನೆ ಸ್ಥಳಕ್ಕೆ ಕೊಳ್ಳೇಗಾಲ ಡಿವೈಎಸ್‌ಪಿ ಸೋಮೇಗೌಡ ಹಾಗೂ ಇನ್ಸ್‌ಪೆಕ್ಟರ್‌ ಸಂತೋಷ್ಕಶ್ಯಪ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶಾಸಕ ಆರ್.ನರೇಂದ್ರ ಹಾಗೂ ಮಾಜಿ ಶಾಸಕಿ ಪರಿಮಳ ನಾಗಪ್ಪ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
 
ಅಲಗುಮೂಲೆ ಗ್ರಾಮದ ಕುಮಾರ್ (40) ಮೃತ ವ್ಯಕ್ತಿ ಎಂದು ಗುರುಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು