ನೇತಾಜಿ 125ನೇ ವರ್ಷಾಚರಣೆ ಪ್ರಯುಕ್ತ 8ರಂದು ಮೈಸೂರು ಜಿಲ್ಲಾ ಮಟ್ಟದ ಸ್ಪರ್ಧೆಗಳು

ಮೈಸೂರು : ಜನವರಿ 7 ರಿಂದ ರಾಜ್ಯದೆಲ್ಲೆಡೆ ಮಹಾನ್ ಕ್ರಾಂತಿಕಾರಿ ನೇತಾಜಿ ಸುಭಾμï ಚಂದ್ರ ಬೋಸ್ ಅವರ 125ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಾಜ್ಯ ಮಟ್ಟದ ಸಾಂಸೃತಿಕ-ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. 
"ಭಾರತದ ಮಹಾನ್ ಸ್ವಾತಂತ್ರ ಸಂಗ್ರಾಮದಲ್ಲಿ ನೇತಾಜಿ ಹಾಗೂ ಐಎನ್‍ಎ ಪಾತ್ರ ಹಾಗೂ ಅದರ ಪ್ರಸ್ತುತತೆ", ವಿಷಯದ ಕುರಿತು ಪ್ರಬಂಧ ರಚನೆ, ಚರ್ಚಾ ಸ್ಪರ್ಧೆ, ಚಿತ್ರಕಲೆ, ಸ್ವರಚಿತ ಕವನ, ಹಾಗೂ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. 
ಜೊತೆಗೆ, ಕ್ರಿಕೆಟ್ ಸೇರಿದಂತೆ ಇತರೆ ಕ್ರೀಡಾ ಪಂದ್ಯಾವಳಿಯನ್ನು ಸಂಘಟಿಸಲಾಗುತ್ತಿದೆ. ಮೈಸೂರು ಜಿಲ್ಲೆಯ ಹೆಸರಾಂತ ಕಲಾವಿದರು ಈ ಸ್ಪರ್ಧೆಗಳಿಗೆ ತೀರ್ಪುಗಾರರಾಗಿ ಬರುತ್ತಿದ್ದಾರೆ. ಮೈಸೂರು ಜಿಲ್ಲೆಯ ನಟರಾಜ ಶಿಕ್ಷಣ ಸಂಸ್ಥೆಯಲ್ಲಿ ಸಾಂಸ್ಕøತಿಕ ಸ್ಪರ್ಧೆಗಳು ನಡೆಯಲಿವೆ.




 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು