ಸ್ಯಾಂಟ್ರೋ ರವಿಗೆ 14 ದಿನ ನ್ಯಾಯಾಂಗ ಬಂಧನ : ಪೊಲೀಸ್ ಕಸ್ಟಡಿಗೆ ಪಡೆಯಲು ಸೋಮವಾರ ಅರ್ಜಿ ಸಲ್ಲಿಸುವಂತೆ ನ್ಯಾಯಾಧೀಶರು ಸೂಚನೆ

ಮೈಸೂರು: ವೇಶ್ಯಾವಾಟಿಕೆ, ಅಕ್ರಮ ವರ್ಗಾವಣೆ, ಅತ್ಯಾಚಾರ ಸೇರಿದಂತೆ ಹಲವು ಆರೋಪಗಳನ್ನು ಎದುರಿಸುತ್ತಿರುವ ಸ್ಯಾಂಟ್ರೋ ರವಿಯನ್ನು   ಶನಿವಾರ ಮೈಸೂರಿಗೆ ಕರೆ ತರಲಾಗಿದ್ದು ವಿಜಯನಗರ ಠಾಣೆಯಲ್ಲಿ ವಿಚಾರಣೆ ನಡೆಸಿ ಸಂಜೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.  
ನ್ಯಾಯಾಧೀಶರು ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ್‍ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದು, ತಮ್ಮ ಕಸ್ಟಡಿಗೆ ಪಡೆಯಲು ಪೊಲೀಸರು ನಡೆಸಿದ ಯತ್ನ ವಿಫಲವಾಗಿದ್ದು, ಸೋಮವಾರ ಅರ್ಜಿ ಸಲ್ಲಿಸುವಂತೆ ನ್ಯಾಯಾಧೀಶರು ಪೊಲೀಸರಿಗೆ ಸೂಚಿಸಿದ್ದಾರೆ.
ಇಂದು ಬೆಳಿಗ್ಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿ ಮುತ್ತುರಾಜ್ ಸ್ಯಾಂಟ್ರೋ ರವಿಯನ್ನು ವಿಚಾರಣೆ ನಡೆಸಿ ಹಲವು ಮಾಹಿತಿಗಳನ್ನು ಸಂಗ್ರಹಿದ್ದಾರೆ. 
ವಿಚಾರಣೆ ವೇಳೆ ಸ್ಯಾಂಟ್ರೋ ರವಿ ಶುಗರ್ ಲೆವೆಲ್ ಏರುಪೇರಾಗದಂತೆ ತಡೆಯಲು ಗಂಟೆಗೊಮ್ಮೆ ಇನ್ಸುಲಿನ್ ನೀಡಲಾಗಿತ್ತು. ಯಾವುದೇ ಅಂಜಿಕೆ ಇಲ್ಲದೆ ಸ್ಯಾಂಟ್ರೋ ಪೊಲೀಸರಿಗೆ ಉತ್ತರಿಸಿದ್ದಾನೆ ಎನ್ನಲಾಗಿದೆ.




 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು