ಕೆ.ಎಂ.ದೊಡ್ಡಿ ಪೊಲೀಸರಿಂದ ಕುಖ್ಯಾತ ಮನೆಗಳ್ಳನ ಬಂಧನ, 18 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ, ಅಟೋ, 4 ಬೈಕ್ ವಶ
ಜನವರಿ 30, 2023
ಟಿ.ಬಿ.ಸಂತೋಷ, ಮದ್ದೂರು ಮದ್ದೂರು : ಮನೆಗಳ ಬೀಗ ಒಡೆದು ಕಳವು ಮಾಡುತಿದ್ದ ಕುಖ್ಯಾತ ಮನೆಗಳ್ಳನನ್ನು ಬಂಧಿಸುವಲ್ಲಿ ಕೆ.ಎಂ.ದೊಡ್ಡಿ ಪೊಲೀಸರು ಯಶಸ್ವಿಯಾಗಿದ್ದು, 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಶ್ರೀರಂಗಪಟ್ಟಣ ತಾಲ್ಲೂಕು ಅರಕೆರೆ ಗ್ರಾಮದ ಮಹಮ್ಮದ್ ರಫೀಕ್ ಬಂಧಿತ ಆರೋಪಿ. ಈತ ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ ಸುಮಾರು 18 ಲಕ್ಷ ರೂ. ಬೆಲೆ ಬಾಳುವ 271 ಗ್ರಾಂ ಚಿನ್ನ, 50 ಗ್ರಾಂ ಬೆಳ್ಳಿಯ ಡಾಬು, ಒಂದು ಗೂಡ್ಸ್ ಆಟೋ ಹಾಗೂ ಕೃತ್ಯಕ್ಕೆ ಬಳಸಿದ್ದ 2 ಬೈಕ್ 5 ಸಾವಿರ ರೂ. ನಗದು ಹಣವನ್ನು ಪೊಲೀಸರು ವಶಪಡಿಸಿಕೊಂದಿದ್ದಾರೆ, ಮಂಡ್ಯ ಎಸ್‍ಪಿ ಎನ್.ಯತೀಶ್, ಅಪರ ಪೊಲೀಸ್ ವರಿμÁ್ಠಧಿಕಾರಿ ವೇಣುಗೋಪಾಲ್ ನಿರ್ದೇಶನ ಮೇರೆಗೆ ಮಳವಳ್ಳಿ ಉಪ ವಿಭಾಗದ ಉಪಾಧೀಕ್ಷಕರಾದ ನವೀನ್ ಅವರ ಮಾರ್ಗದರ್ಶನದಲ್ಲಿ ಕೆ.ಎಂ.ದೊಡ್ಡಿ ಠಾಣೆಯ ಇನ್ಸ್‍ಪೆಕ್ಟರ್ ಶಿವಮಲವಯ್ಯ ನೇತೃತ್ವದಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳಾದ ಭೀಮಪ್ಪ ಬನಾಸಿ, ರಾಮಸ್ವಾಮಿ, ಎಎಸ್‍ಐ ಕರಿಗಿರಿಗೌಡ, ಸಿಬ್ಬಂದಿಗಳಾದ ಪ್ರಭುಸ್ವಾಮಿ, ಮೋಹನ್ ಕುಮಾರ್, ವಿಠ್ಠಲ್ ಕರಿಗಾರ್, ಸುಬ್ರಮಣಿ, ನರಸಿಂಹ ಮೂತಿ, ಸಿಡಿಆರ್ ವಿಭಾಗದ ರವಿಕಿರಣ್ ಮತ್ತು ಲೋಕೇಶ್ ಅವರು ಕಾರ್ಯಾಚರಣೆ ನಡೆಸಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
0 ಕಾಮೆಂಟ್‌ಗಳು