ವಾಹನ ಸವಾರರ ಮೇಲೆ ಮೆಟ್ರೋ ಪಿಲ್ಲರ್‌ ಕುಸಿದು ತಾಯಿ, ಮಗ ಸಾವು

ಬೆಂಗಳೂರು: ದ್ವಿ ಚಕ್ರ ವಾಹನದಲ್ಲಿ ತೆರಳುತ್ತಿದ್ದವರ ಮೇಲೆ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿದು ಬಿದ್ದು ತಾಯಿ, ಮಗು ಮೃತಪಟ್ಟಿರುವ ದಾರುಣ ಘಟನೆ ನಗರದ ಹೆಣ್ಣೂರಿನ ಹೆಚ್ ಬಿ ಆರ್ ಲೇಔಟಿನ ರಿಂಗ್ ರಸ್ತೆಯಲ್ಲಿ ಇಂದು ನಡೆದಿದೆ.
ಮುವತ್ತೈದು ವರ್ಷದ ತೇಜಸ್ವಿನಿ ಮತ್ತು ಎರಡೂವರೆ ವರ್ಷದ ಮಗು ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಘಟನೆಯಲ್ಲಿ ಬೈಕ್ ಓಡಿಸುತ್ತಿದ್ದ ತಂದೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮಗಳ ಕೊರತೆ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ.