ಟಿ.ಬಿ.ಸಂತೋಷ, ಮದ್ದೂರು ಮದ್ದೂರು: ಗೂಡ್ಸ್ ಆಟೋ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನಪ್ಪಿರುವ ಘಟನೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕರಡಕೆರೆ ಗ್ರಾಮದ ಹನುಮೇಗೌಡ ಎಂಬವರ ಪುತ್ರ ಸತೀಶ್(45) ಮೃತ ದುರ್ದೈವಿ. ಸತೀಶ್ ಅವರು ಕರಡಕೆರೆ ಗ್ರಾಮದಿಂದ ಕಾರ್ಯ ನಿಮಿತ್ತ ಭಾರತೀನಗರಕ್ಕೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ಭಾರತೀನಗರದ ಸರ್ಕಾರಿ ಕಾಲೇಜು (ಡಿ.ಸಿ.ತಮ್ಮಣ್ಣ ಕಾಲೇಜು) ಪಕ್ಕದಲ್ಲಿರುವ ಕರಡಕೆರೆ ಮರಿಸ್ವಾಮಿ ಎಂಬವರ ಸಾಮಿಲ್ ಮುಂಭಾಗ ಭಾರತೀನಗರದಿಂದ ಮಂಡ್ಯ ಕಡೆಗೆ ವೇಗವಾಗಿ ತೆರಳುತ್ತಿದ್ದ ಗೂಡ್ಸ್ ಆಟೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಸತೀಶ್ ಅವರನ್ನು ಸ್ಥಳೀಯರ ಸಹಕಾರದಿಂದ ಕೆ.ಎಂ.ದೊಡ್ಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಿದಾಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ ಹಾಗೂ ಮೂವರು ಮಕ್ಕಳಿದ್ದು, ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 ಕಾಮೆಂಟ್‌ಗಳು