ಮಾಚಹಳ್ಳಿಯಲ್ಲಿ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಪುತ್ಥಳಿ ನಿರ್ಮಾಣಕ್ಕೆ ಡಾ.ಎನ್.ಎಸ್.ಇಂದ್ರೇಶ್ ಅವರಿಂದ ಭೂಮಿಪೂಜೆ

ಪಾಂಡವಪುರ: ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದುದ್ದ ಹೋಬಳಿ ಮಾಚಹಳ್ಳಿ ಗ್ರಾಮದಲ್ಲಿ ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುತ್ತಳಿ ನಿರ್ಮಾಣ ಕಾಮಗಾರಿಗೆ ಪರಿವರ್ತನಾ ಟ್ರಸ್ಟ್ ಅಧ್ಯಕ್ಷ, ಬಿಜೆಪಿ ಮುಖಂಡ ಡಾ.ಎನ್.ಎಸ್.ಇಂದ್ರೇಶ್ ಊರಿನ ಯಜಮಾನರು, ಯುವ ಮುಖಂಡರು ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಸೋಮವಾರ ಭೂಮಿ ಪೂಜೆ ಸಲ್ಲಿಸಿದರು.
ಬೇಬಿ ಬೆಟ್ಟದ ಶ್ರೀ ರಾಮಯೋಗೀಶ್ವರ ಮಠದ ಶ್ರೀ ಶಿವಬಸವ ಸ್ವಾಮೀಜಿ ಅವರು ಪೂಜಾ ಕಾರ್ಯವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಆನಂದ್, ದುರ್ಗೇಶ್, ಅಶೋಕ್, ಮಾಚಹಳ್ಳಿರಾಜು, ಚಿಕ್ಕಮರಳ್ಳಿ ನವೀನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು