ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆಗೆ ಹೆಚ್ಚುವರಿ ಸಿಟಿ ಸಿವಿಲ್‌ ಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ರಾಜಕೀಯವಾಗಿ ಹಣಿಯಲು ಸಿದ್ದತೆ ನಡೆಸಿರುವ ಬಿಜೆಪಿ, ಇಂದು ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆಗೆ ಸಿದ್ಧತೆ ನಡೆಸಿದ್ದು, ಬೆಂಗಳೂರು ಹೆಚ್ಚುವರಿ ಸಿಟಿ ಸಿವಿಲ್‌ ಕೋರ್ಟ್‌ ಪುಸ್ತಕ ಬಿಡುಗಡೆಗೆ ತಡೆಯಾಜ್ಞೆ ನೀಡಿದೆ.
ಸಿದ್ಧರಾಮಯ್ಯ ಅವರ ಮೇಲೆ ಹಿಂದೂ ಧರ್ಮಾಸ್ತ್ರ ಪ್ರಯೋಗಿಸಲು ಮುಂದಾಗಿರುವ ಬಿಜೆಪಿ ಸಿದ್ದರಾಮಯ್ಯ ಅವರ ರಾಜಕೀಯ ಶಕ್ತಿಯನ್ನು ಕುಗ್ಗಿಸಲು ಹಲವು ತಂತ್ರಗಳನ್ನು ಅನುಸರಿಸುತ್ತಿದ್ದು, ಇಂದು ಮಧ್ಯಾಹ್ನ ೩ ಗಂಟೆಗೆ ಬೆಂಗಳೂರಿನಲ್ಲಿ ಸಿದ್ದು ನಿಜಕನಸುಗಳು ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಿದ್ದು ಅದಕ್ಕೆ ತಡೆಯಾಜ್ಞೆ ತರಲು ಕಾಂಗ್ರೆಸ್‌ ಯಶಸ್ವಿಯಾಗಿದೆ. ಒಂದು ವೇಲೆ ಪುಸ್ತಕ ಬಿಡುಗಡೆಯಾದರೂ ಅದರ ವಿರುದ್ಧ ಭಾರಿ ಪ್ರತಿಭಟನೆ ನಡೆಸಲು ಕುರುಬ ಸಂಘದ ಪದಾಧಿಕಾರಿಗಳು, ಸಿದ್ದರಾಮಯ್ಯ ಅಭಿಮಾನಿಗಳು ಸಿದ್ಧತೆ ನಡೆಸಿದ್ದರು.
ಸಿದ್ಧರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕೈಗೊಂಡ ಕೆಲವು ನಿರ್ಣಯಗಳು ಹಿಂದೂ ವಿರೋಧಿಯಾಗಿದ್ದವು. ಅವರು ಟಿಪ್ಪು ಸುಲ್ತಾನನನ್ನು ಹೊಗಳುವ ಮೂಲಕ ಹಿಂದೂ ವಿರೋಧಿ ನಿಲುವನ್ನು ತಳೆದಿದ್ದರು. ಸಿದ್ಧರಾಮಯ್ಯ ಅವರ ಆಡಳಿತಾವಧಿಯಲ್ಲಿ ಹಿಂದೂಗಳ ಹತ್ಯೆ ನಡೆದಿದೆ ಎಂಬ ಪ್ರಸ್ತಾಪಗಳು ಪುಸ್ತಕದಲ್ಲಿವೆ ಎನ್ನಲಾಗಿದೆ.
ಮಾನನಷ್ಟ ಮೊಕದ್ದಮೆಗೆ ಸದ್ಧತೆ: ಪುಸ್ತಕ ಬಿಡುಗಡೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.   ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಹಳದಿಯೇ. ಟಿಪ್ಪು ಡ್ರೆಸ್ ಹಾಕಿ ಖಡ್ಗ ಹಿಡಿದುಕೊಂಡಿದ್ದವರು ಯಾರು, ಟಿಪ್ಪು ಪುಸ್ತಕಕ್ಕೆ ಮುನ್ನುಡಿ ಬರೆದವರು ಯಾರು, ಎಲ್ಲರೂ ಬಿಜೆಪಿ ನಾಯಕರೇ. ಇಂದು ನನ್ನ ತೇಜೋವಧೆ ಮಾಡಲು ಪುಸ್ತಕ ಬಿಡುಗಡೆ ಮಾಡುತ್ತಿದ್ದಾರೆ. ಚುನಾವಣೆ ವೇಳೆ ಇಂತಹ ಪುಸ್ತಕ ತರುತ್ತಿದ್ದಾರೆ. ಕಾನೂನು ಪ್ರಕಾರ ಏನು ಮಾಡಲು ಆಗುತ್ತದೆ ಎಂದು ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ ಎಂದರು
.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು