ಮೈಸೂರು ನಗರದ ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ವ್ಯಸನ : ಮಾದಕ ವಸ್ತುಗಳ ಮಾರಾಟಗಾರರ ವಿರುದ್ಧ ಕ್ರಮಕ್ಕೆ ಒತ್ತಾಯ

ಮೈಸೂರು : ನಗರದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಪದಾರ್ಥಗಳನ್ನು ಮಾರಾಟ ಮಾಡುವ ಜಾಲ ಹೆಚ್ಚಾಗಿದ್ದು, ಕೂಡಲೇ ಮಾರಾಟಗಾರರನ್ನು ಬಂಧಿಸುವಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಪೊಲೀಸ್‌ ಆಯುಕ್ತ ರಮೇಶ್‌ ಬಾನೂತ್‌ ಅವರಿಗೆ ಮನವಿ ಸಲ್ಲಿಸಿದರು.
ಭವ್ಯವಾದ ಭವಿಷ್ಯದ ಕನಸು ಹೊತ್ತ ಅಮಾಯಕ ವಿದ್ಯಾರ್ಥಿಗಳನ್ನು ಇಂದು ಮಾಧಕ ವ್ಯಸನಿಗಳಾಗುತ್ತಿರುವುದು ಆತಂಕದ ವಿಷಯವಾಗಿದ್ದು, ಶ್ರೀಮಂತ ಮನೆತನದ ವಿದ್ಯಾರ್ಥಿಗಳ ಜತೆ ಬಡ ವಿದ್ಯಾರ್ಥಿಗಳೂ ಸಹ ಹೀನ ಕೃತ್ಯಕ್ಕೆ ಸಿಲುಕುತ್ತಿದ್ದಾರೆ. ವಿಶ್ವದಲ್ಲಿಯೇ ಪ್ರವಾಸೋದ್ಯಮ ಮತ್ತು ಶಿಕ್ಷಣಕ್ಕೆ ಹೆಸರಾದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ಕೃತ್ಯ ನಡೆಯುತ್ತಿರುವುದು ನಗರಕ್ಕೆ ಕಳಂಕವಾಗಿದೆ. ಇದರಿಂದ ದೇಶ ವಿದೇಶ ಹಾಗೂ ಹೊರ ರಾಜ್ಯಗಳಿಂದ ವಿದ್ಯಾಭ್ಯಾಸಕ್ಕಾಗಿ ಬರುವ ಸಾವಿರಾರು ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರಲಿದೆ. ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಮಾದಕ ಪದಾರ್ಥಗಳ ಮಾರಾಟಗಾರರನ್ನು ಹಿಡಿದು ಕಾನೂನು ರೀತ್ಯ ಶಿಕ್ಷಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ ಅಧ್ಯಕ್ಷ ಜಾಕೀರ್ ಹುಸೇನ್ , ಗೌರವಾಧ್ಯಕ್ಷ ಎಂ. ಚಂದ್ರಶೇಖರ್, ಮಾಜಿ ಮಹಾಪೌರ  ಪುರುಷೋತ್ತಮ್ , ಎಸ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಪ್ರಶಾಂತ್ ಆರ್ಯ,  ಕಮಲಾ ಅನಂತರಾಮು, ಅರವಿಂದ ಶರ್ಮಾ, ರದಿವುಲ್ಲ ಖಾನ್,  ದ್ಯಾವಪ್ಪ ನಾಯ್ಕ, ಶಿವಪ್ಪ
ಇದ್ದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು