ಮೈಸೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಪೋಟ: ೬ ಮಂದಿಗೆ ಗಾಯ , ಇಬ್ಬರ ಸ್ಥಿತಿ ಗಂಭೀರ

ಅಗ್ನಿಶಾಮಕ ಸಿಬ್ಬಂದಿಗಳ ಕ್ವಾಟ್ರಸ್‌ನಲ್ಲಿ ಘಟನೆ 

ಮೈಸೂರು: ನಗರದ ಬನ್ನಿಮಂಟಪ ಬಳಿಯ ಅಗ್ನಿ ಶಾಮಕ ಸಿಬ್ಬಂದಿಗಳ ಕ್ವಾಟ್ರಸ್‌ನಲ್ಲಿ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು ೬ ಜನರು ಗಾಯಗೊಂಡಿರುವ ಘಟನೆ ನಡೆದಿದೆ. 

ಈ ಪೈಕಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಎಲ್ಲರನ್ನೂ ಪಕ್ಕದಲ್ಲೇ ಇರುವ ಸೆಂಟ್‌ ಜೋಸೆಫ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳ ವಸತಿ ಗೃಹದ ಮನೆಯೊಂದರಲ್ಲಿಈ ಘಟನೆ ನಡೆದಿದ್ದು, ಅಕ್ಕಪಕ್ಕದ ಮನೆಗಳಗೂ ಬೆಂಕಿ ವ್ಯಾಪಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಒಂದೇ ಮನೆಯ ನಾಲ್ವರು ಹಾಗೂ ಅಕ್ಕಪಕ್ಕದ  ಇಬ್ಬರು ಗಾಯಗೊಂಡಿದ್ದಾರೆ.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು