ಚಾಮುಂಡೇಶ್ವರಿಯಲ್ಲಿ ಬಿಜೆಪಿ ಬಲವರ್ಧನೆ : ನಾಗನಹಳ್ಳಿ ಜಗದೀಶ್ ಗೌಡ ವಿಶ್ವಾಸ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಶಕ್ತಿ ಹಿಂದೆಂದಿಗಿಂತಲೂ ಬಲವರ್ಧನೆಯಾಗಿದ್ದು, ಮತದಾರರು ಬದಲಾವಣೆ ಬಯಸಿದ್ದಾರೆ ಎಂದು ಬಿಜೆಪಿ ಮುಖಂಡರಾದ ನಾಗನಹಳ್ಳಿ ಜಗದೀಶ್ ಗೌಡ ಹೇಳಿದರು.
ಚಾಮುಂಡೇಶ್ವರಿ ಕ್ಷೇತ್ರದ ರಮ್ಮನಹಳ್ಳಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾ ತ್ರೆಯಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕೈಪಿಡಿಯನ್ನು ಬಿಡುಗಡೆ ಮಾಡಿ ಗ್ರಾಮದಲ್ಲಿನ ಮನೆ ಮನೆಗಳಿಗೆ ವಿತರಣೆ ಮಾಡಿ ಅವರು ಮಾತನಾ ಡಿದರು.
ಚಾಮುಂಡೇಶ್ವರಿ ಕ್ಷೇತ್ರವು ಅಭಿವೃದ್ಧಿಯಲ್ಲಿ ತೀರಾ ಹಿಂದುಳಿದಿದೆ. ನೀರಾವರಿ ಯೋಜನೆಗಳು ಸ್ಥಗಿತವಾಗಿವೆ. ಕುಡಿಯುವ ನೀರಿನ ಸಮಸ್ಯೆ ತಾಂಡವವಾಡುತ್ತಿದೆ. ಈ ಕಾರಣದಿಂದ ಮತದಾರರು ಬೇಸತ್ತಿದ್ದು, ಈ ಬಾರಿ ಬಿಜೆಪಿ ಗೆಲ್ಲಿಸುವ ಸಂಕಲ್ಪ ಮಾಡಿದ್ದಾರೆ. ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಯಾತ್ರೆ ಯಶಸ್ವಿಯಾಗಿ ನಡೆದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಮನೆ ಮನೆಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಇಲ್ಲಿ ಬಿಜೆಪಿ ಗೆಲ್ಲುವುದು ಶತಸಿದ್ಧ ಎಂದರು.
ವಿಜಯ ಸಂಕಲ್ಪ ಯಾತ್ರೆ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ 
ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಮಹೇಶ್ ಮಾತನಾಡಿ, ಬಿಜೆಪಿ ವರಿಷ್ಠರು ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು, ಈ ಬಾರಿ ಇಲ್ಲಿ ಕಮಲ ಅರಳಿಸಲು ಸಕಲ ಕಾರ್ಯತಂತ್ರಗಳನ್ನು ರೂಪಿಸಲಾಗಿದೆ. ಮತದಾರರು ಬಿಜೆಪಿ ಬೆಂಬಲಿಸಿ ಎಂದು ಕೋರಿದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರಾದ ಮಹೇಂದ್ರ, ಹೇಮಂತ್  ಕುಮಾರ್, ನಗರ ಪ್ರಧಾನ ಕಾರ್ಯದರ್ಶಿ ವಾಣೀಶ್ ಕುಮಾರ್, ಅರುಣ್ ಕುಮಾರ್ ಗೌಡ, ನಗರ ಕಾರ್ಯದರ್ಶಿ ನಂದೀಶ್ ಕುಮಾರ್, ಚಾಮುಂಡೇಶ್ವರಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ವೀರಪ್ಪ, ರವಿ, ನಾರಾಯಣ, ಲೋಹಿತ್, ಶೋಭಾ, ಮೋನಿಕಾ, ರಮ್ಮನಹಳ್ಳಿ ಗ್ರಾಮದ ನಾಗರಾಜು, ಸಂಜು, ಕೃಷ್ಣ ಮತ್ತಿತರರು ಇದ್ದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು