ಗ್ಯಾಸ್ ಸಿಲಿಂಡರ್ ಸ್ಪೋಟ: ಚಿಲ್ಲರೆ ಅಂಗಡಿ ಭಸ್ಮ

ನಾಗೇಂದ್ರ ಕುಮಾರ್, ಟಿ.ನರಸೀಪುರ
ತಿ.ನರಸೀಪುರ: ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಚಿಲ್ಲರೆ ಅಂಗಡಿಯೊಂದು ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ತಾಲ್ಲೂಕಿನ ಮಲಿಯೂರು ಗ್ರಾಮದಲ್ಲಿ ನಡೆದಿದೆ. 
ಗ್ರಾಮದ ಮಹದೇವ ಎಂಬುವರಿಗೆ ಸೇರಿದ ಚಿಲ್ಲರೆ ಅಂಗಡಿಯಾಗಿದ್ದು, 
ಯಾವುದೇ ಪ್ರಾಣಪಾಯ ಉಂಟಾಗಿಲ್ಲ. ಅಂಗಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಚಿಲ್ಲರೆ ಅಂಗಡಿ ಸಂಪೂರ್ಣ ಬೂದಿಯಾಗಿದೆ. ಬೆಂಕಿ ನಂದಿಸಲು ಗ್ರಾಮಸ್ಥರು ಮುಂದಾದರೂ ಕ್ಷಣ ಮಾತ್ರದಲ್ಲಿ ಚಿಲ್ಲರೆ ಅಂಗಡಿ ಸುಟ್ಟು ಬೂದಿಯಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು