ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ : ತಪ್ಪಿದ ಭಾರಿ ಅನಾಹುತ
ಜನವರಿ 05, 2023
ಹುಣಸೂರು: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ವಿದ್ಯುತ್ ಕಂಬದ ಬಳಿ ಉರುಳಿ ಬಿದ್ದ ಘಟನೆ ಹುಣಸೂರು ತಾಲೂಕಿನ ಬಸರಿಕಟ್ಟೆ ಗ್ರಾಮದ ಬಳಿಯ ರಸ್ತೆಯಲ್ಲಿ ನಡೆದಿದೆ. ಕೇರಳದಿಂದ ಬೆಂಗಳೂರಿಗೆ ಕಬ್ಬಿಣದ ಶೀಟ್‍ಗಳನ್ನು ಸಾಗಿಸುತ್ತಿದ್ದ ಟ್ರಕ್ ಉರುಳಿ ಬಿದ್ದಿದೆ. ಸಮೀಪದಲ್ಲೇ ವಿದ್ಯುತ್ ಕಂಬ ಇದ್ದರೂ ಅದಕ್ಕೆ ವಿದ್ಯುತ್ ಸಂಪರ್ಕ ಇಲ್ಲದ ಪರಿಣಾಮ ಅನಾಹುತ ತಪ್ಪಿದಂತಾಗಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಿಳಿಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.