ಕೆ.ಎಂ.ದೊಡ್ಡಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವಿಜೃಂಭಣೆಯಿಂದ ಜರುಗಿದ ವೈಕುಂಠ ಏಕಾದಶಿ ಪೂಜಾ ಮಹೋತ್ಸವ

10 ಸಾವಿರ ಕಜ್ಜಾಯ, ಬಾಳೆಹಣ್ಣು ಬಾದಾಮಿ ಹಾಲು ವಿತರಣೆ 

 ಟಿ.ಬಿ.ಸಂತೋಷ, ಮದ್ದೂರು
ಮದ್ದೂರು: ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪೂಜಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. 
ಮೇಲುಕೋಟೆ ಡಾ.ಶೇಲ್ವಪಿಳ್ಳೆ ಅಯ್ಯಂಗಾರ್ ನೇತೃತ್ವದಲ್ಲಿ ಮುಂಜಾನೆ 5 ಗಂಟೆಯಿಂದ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ವೈಕುಂಠ ದ್ವಾರ ಪ್ರವೇಶದೊಂದಿಗೆ  ಶ್ರೀ ವೆಂಕಟೇಶ್ವರ ಸ್ವಾಮಿ ಅಷ್ಟವದನ ಸೇವೆ ಹಾಗೂ ಮಹಾ ಮಂಗಳಾರತಿ ಸಲ್ಲಿಸಲಾಯಿತು. 

ಸುಮಾರು 7.1 ಅಡಿ ಎತ್ತರವಿರುವ ಶ್ರೀ ವೆಂಕಟೇಶ್ವರ ಮೂರ್ತಿಗೆ ವಿಶೇಷ ಆಭರಣಗಳೊಂದಿಗೆ ಅಲಂಕಾರಗೊಳಿಸಿ ದೇವಸ್ಥಾನದ ಸುತ್ತಲೂ ವಿವಿಧ ಬಗೆಯ ಪುಷ್ಪಗಳಿಂದ ಸಿಂಗರಿಸಲಾಗಿತ್ತು. ಇವು ಭಕ್ತಾದಿಗಳ ಗಮನ ಸೆಳೆಯಿತು. 
ಶ್ರೀ ವೆಂಕಟೇಶ್ವರ ಸೇವಾ ಟ್ರಸ್ಟ್‍ನಿಂದ ಸುಮಾರು 10 ಸಾವಿರ ಕಜ್ಜಾಯ,  ಬಾಳೆ ಹಣ್ಣುಗಳು ಹಾಗೂ ಬಾದಾಮಿ ಹಾಲಿನ ಪ್ರಸಾದವನ್ನು ಭಕ್ತಾದಿಗಳಿಗೆ ನೀಡಲಾಯಿತು.
ಕೆ.ಎಂ.ದೊಡ್ಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ವೈಕುಂಠ ಏಕಾದಶಿ ಪೂಜಾ ಮಹೋತ್ಸವದಲ್ಲಿ ಭಾಗಿಗಳಾಗಿ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದು ಪುನೀತರಾದರು. 




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು