ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮಿ ನಿಧನ : ನಾಳೆ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ವಿಜಯಪುರ: ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (70) ಇಂದು ಸಂಜೆ ನಿಧನರಾಗಿದ್ದಾರೆ. ಈ ವಿಷಯವನ್ನು ವಿಜಯಪುರ ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ದಾನಮ್ಮನವರ್ ಪ್ರಕಟಿಸಿದರು. 
ವಯೋಸಹಜ ಕಾಯಿಲೆಯಿಂದ ಬಳಲುಹಿತ್ತಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಚಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ವಿಜಯಪುರದ ಬಿಎಲ್‍ಡಿಇ ಆಸ್ಪತ್ರೆಯ ವೈದ್ಯರ ತಂಡ ಸ್ವಾಮೀಜಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿತ್ತು.
ಭಾನುವಾರ ಕೊಂಚ ಚೇತರಿಕೆ ಕಂಡಿದ್ದ ಶ್ರೀಗಳ ಆರೋಗ್ಯ ಸೋಮವಾರ ತೀವ್ರ ಹದಗೆಟ್ಟಿತ್ತು. ಆಹಾರ ಸೇವಿಸದ ಕಾರಣ ಸ್ಯಾಚುರೆಷನ್ ಪ್ರಮಾಣ ಕ್ಷೀಣಿಸುತ್ತಾ ಸಾಗಿತ್ತು. ಇತ್ತ ಉಸಿರಾಟದ ಸಮಸ್ಯೆಯೂ ತೀವ್ರಗೊಂಡಿತ್ತು. ಬೆಳಗ್ಗೆ ಗಂಜಿ ಕುಡಿದಿದ್ದ ಶ್ರೀಗಳು ಬಳಿಕ ಯಾವುದೇ ಆಹಾರ ಸೇವಿಸಿಲ್ಲ ಎನ್ನಲಾಗಿದೆ 
ನಾಳೆ ಸಂಜೆ 5 ಗಂಟೆಗೆ ಅಂತ್ಯಕ್ರೀಯೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಸಂಜೆ 4 ಗಂಟೆಗೆ ಸರ್ಕಾರದಿಂದ ಗಾಡ್ ಆಫ್ ಹಾನರ್ ನೀಡಲಾಗುತ್ತದೆ. ಸಂಜೆ 5 ಗಂಟೆಗೆ ಸೈನಿಕ್ ಸ್ಕೂಲ್‍ನಿಂದ ಆಶ್ರಮಕ್ಕೆ ಪಾರ್ಥೀವ ಶರೀರ ವಾಪಸ್ ತರಲಾಗುತ್ತದೆ. ಸಿದ್ದೇಶ್ವರ ಶ್ರೀಗಳ ಇಚ್ಚೆಯಂತೆ ಅಗ್ನಿಸ್ಪರ್ಶ ಮಾಡಿ ಅಂತ್ಯಕ್ರೀಯ ಮಾಡಲಾಗುತ್ತದೆ. ಇμÉ್ಟೀ ಅಲ್ಲ ತಮ್ಮ ಯಾವುದೇ ಸಮಾಧಿಯನ್ನು ನಿರ್ಮಸಬಾರದು ಎಂದು ಶ್ರೀಗಳು ಆದೇಶ ನೀಡಿದ್ದರು. ತಮ್ಮ ಚಿತಾಭಸ್ಮವನ್ನು ನದಿ ಅಥವಾ ಸಾಗರದಲ್ಲಿ ವಿಸರ್ಜಿಸಲು ಸೂಚಿಸಿದ್ದಾರೆ. 




 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು