ಹಳೇಯ ದ್ವೇಷ: ಯುವಕನನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದು ಬರ್ಬರ ಹತ್ಯೆ
ಜನವರಿ 18, 2023
ಆಲೂರು: ಹಳೆಯ
ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ
ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಮಗ್ಗೆ ಗ್ರಾಮದಲ್ಲಿ ನಡೆದಿದೆ. ಭರತ್ (27) ಕೊಲೆಯಾದ
ಯುವಕ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಂಗಳವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ
ಭರತ್‌ನ ಬೈಕನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಆತನ ಹೊಟ್ಟೆಗೆ ಚುಚ್ಚಿ ಕೊಲೆ
ಮಾಡಿದ್ದಾರೆ. ತೀವ್ರ ರಕ್ತಸ್ರಾವದಿಂದ
ಭರತ್ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳ
ಪತ್ತೆಗೆ ಎರಡು ವಿಶೇಷ ತಂಡಗಳನ್ನ ರಚಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
0 ಕಾಮೆಂಟ್‌ಗಳು